ಖಾನಾಪುರದಲ್ಲಿ ನನಗೆ ಹೊಡೆದರು: ಕೋರ್ಟ್ ನಲ್ಲಿ ನ್ಯಾಯಾಧೀಶರ ಮುಂದೆ ಸಿ.ಟಿ.ರವಿ ಹೇಳಿಕೆ
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂ.ಎಲ್.ಸಿ. ಸಿ.ಟಿ.ರವಿಯನ್ನು ಪೊಲೀಸರು ಬೆಳಗಾವಿ ಜೆಎಂಎಫ್ ಸಿ ಕೋರ್ಟ್ ಗೆ ಹಾಜರು ಪಡಿಸಿದ್ದಾರೆ.
ಕೋರ್ಟ್ ನಲ್ಲಿ ಜಡ್ಜ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿ.ಟಿ.ರವಿ, ಗುರುವಾರ ಮಧ್ಯಾಹ್ನ ವಿಧಾನಸಭೆಯ ಕಾರಿಡಾರ್ ನಲ್ಲಿ, ನಿನ್ನ ಹೆಣ ಚಿಕ್ಕಮಗಳೂರಿಗೆ ಹೋಗುತ್ತೆ ಎಂದು ಮಂತ್ರಿ ಧಮ್ಕಿ ಹಾಕಿದ್ದರು. ರಾತ್ರಿ ಪೊಲೀಸರು ಎಲ್ಲೆಲ್ಲೋ ಕರೆದೊಯ್ಯುತ್ತಿದ್ದರು. ದೇವರ ಮೇಲೆ ಭಾರ ಹಾಕಿ ನಾನು ಹೋದೆ. ನಿಮ್ಮನ್ನು ನೋಡಿಕೊಳ್ಳುತ್ತೇವೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಡಿ.ಕೆ.ಶಿವಕುಮಾರ್ ಕೌನ್ಸಿಲ್ ಹಾಲ್ ಒಳಗೆ ಹೇಳಿದ್ದರು ಎಂದು ಸಿ.ಟಿ.ರವಿ ಹೇಳಿದರು.
ನನ್ನನ್ನು ಪೊಲೀಸರು ನಿಗೂಢ ಜಾಗಕ್ಕೆ ಕರೆದೊಯ್ದರು. ದೂರ ಹೋಗಿ ನಿಂತು ಮಾತನಾಡುತ್ತಿದ್ದರು. ಖಾನಾಪುರದಲ್ಲಿ ನನಗೆ ಹೊಡೆದರು. ತಲೆಯಲ್ಲಿ ರಕ್ತ ಬರುತ್ತಿತ್ತು ಎಂದು ಸಿ.ಟಿ.ರವಿ ಹೇಳಿದರು.
ನಿಮಗೆ ಯಾರು ಹೊಡೆದರು ಎಂದು ಜಡ್ಜ್ ಪ್ರಶ್ನಿಸಿದಾಗ ಯಾರು ಹೊಡೆದರು ಎಂದು ಗೊತ್ತಾಗಲಿಲ್ಲ, ಪೊಲೀಸರೇ ಹೊಡೆದಿರಬಹುದು, ಅವರೇ ನನ್ನನ್ನು ಎತ್ತಿಕೊಂಡು ಹೋದರು ಎಂದು ಸಿ.ಟಿ.ರವಿ ಹೇಳಿದರು.
ಇನ್ನೂ ಸಿ.ಟಿ.ರವಿ ಪರ ವಕೀಲ ಜಿರಲಿ ವಾದಿಸಿ, ರಾತ್ರಿಯಿಡೀ 10 ಗಂಟೆಗಳ ಕಾಲ ನಂದಗಡ, ಖಾನಾಪುರ, ಧಾರವಾಡ, ಗದಗ, ರಾಮದುರ್ಗ, ಸವದತ್ತಿ ಹೀಗೆ ಎಲ್ಲಾ ಕಡೆ ಪೊಲೀಸರು ಸುತ್ತಿಸಿದ್ದಾರೆ. ಕೋರ್ಟ್ ಗೆ ಬರುವವರೆಗೆ ನಿಗೂಢ ಜಾಗಕ್ಕೆ ಕರೆದೊಯ್ದಿದ್ದರು ಎಂದರು.
10 ನಿಮಿಷಕ್ಕೊಮ್ಮೆ ಯಾರದ್ದೋ ಕರೆ ಪೊಲೀಸರಿಗೆ ಬರುತ್ತಿತ್ತು. ಅವರ ಸೂಚನೆಯಂತೆ ಪೊಲೀಸರು ವರ್ತಿಸುತ್ತಿದ್ದರು. ಯಾವ ಕಾರಣಕ್ಕೆ ಅರೆಸ್ಟ್ ಮಾಡಲಾಗಿದೆ ಅಂತ ಪೊಲೀಸರು ತಿಳಿಸಿರಲಿಲ್ಲ, ಸಿ.ಟಿ.ರವಿ ಅವರ ವಾಚ್ ಕಿತ್ತುಕೊಳ್ಳಲು ಪ್ರಯತ್ನಿಸಿದರು ಎಂದು ವಕೀಲರು ಕೋರ್ಟ್ ಗೆ ತಿಳಿಸಿದರು.
ಸಿ.ಟಿ.ರವಿ ವಿರುದ್ಧದ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶೆ, ಜಾಮೀನು ಅರ್ಜಿ ವಿಚಾರಣೆಯನ್ನು ಮಧ್ಯಾಹ್ನ 3 ಗಂಟೆಗೆ ಮುಂದೂಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: