10:34 PM Wednesday 12 - March 2025

ತಿಂಡಿ ತಿನ್ನಲು ಬಂದ ವಿದ್ಯಾರ್ಥಿ ಹೋಟೆಲ್​ ನಲ್ಲೇ ಹೃದಯಾಘಾತದಿಂದ ಸಾವು

nithish kumar
07/02/2022

ಮೈಸೂರು: ಹೊಟೆಲ್​ಗೆ ತಿಂಡಿ ತಿನ್ನಲು ಬಂದ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಹುಣಸೂರು ಪಟ್ಟಣದಲ್ಲಿ ನಡೆದಿದ್ದು, ಈ ದೃಶ್ಯ ಸಿಸಿ ಟಿವಿಯನ್ನು ಸೆರೆಯಾಗಿದೆ.

ವಿದ್ಯಾರ್ಥಿ ನಿತೀಶ್ ಕುಮಾರ್ (25)​ ಹೃದಯಾಘಾತದಿಂದ ಮೃತಪಟ್ಟಿರುವ ವಿದ್ಯಾರ್ಥಿ. ಈತ ಹುಣಸೂರು ತಾಲೂಕಿನ ನಂಜಪುರ ಗ್ರಾಮದ ನಿವಾಸಿಯಾಗಿದ್ದು, ಮೈಸೂರಿನ ವಿದ್ಯಾವರ್ಧಕ ಕಾನೂನು ಕಾಲೇಜಿನಲ್ಲಿ ನಾಲ್ಕನೇ ವರ್ಷದ ಕಾನೂನು ಪದವಿ ವ್ಯಾಸಂಗ ಮಾಡುತ್ತಿದ್ದಾರೆ. ಹುಣಸೂರು ಪಟ್ಟಣದಲ್ಲಿ ಸ್ನೇಹಿತನ ಜೊತೆ ತಿಂಡಿ ತಿನ್ನಲು ಹೋಗಿದ್ದರು. ತಿಂಡಿ ತಿನ್ನುತ್ತಾ ಸ್ನೇಹಿತನ ಜೊತೆ ಮಾತನಾಡುತ್ತಿರುವಾಗ ಟೇಬಲ್​ನಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣ ಆತನನ್ನ ಆಸ್ಪತ್ರೆಗೆ ದಾಖಲಿಸಲು ಕೊಂಡೊಯ್ಯಲಾಯಿತು. ಆದರೆ ಮಾರ್ಗ ಮಧ್ಯೆ ನಿತೀಶ್​ ಮೃತಪಟ್ಟಿದ್ದಾನೆ.

ಇನ್ನು ನಿತೀಶ್​ ಸಾವನ್ನಪ್ಪುತ್ತಿರುವ ಕೊನೆ ಕ್ಷಣದ ದೃಶ್ಯ ಹೋಟೆಲ್​ನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹೃದಯಾಘಾತದಿಂದ ಮೃತಪಟ್ಟ ವಿದ್ಯಾರ್ಥಿಯ ಶವವನ್ನ ಮರಣೋತ್ತರ ಪರೀಕ್ಷೆ ನಡೆಸಿ, ಕುಟುಂಬದವರಿಗೆ ಹಸ್ತಾಂತರಿಸಲಾಯಿತು. ಈ ಘಟನೆ ಕುರಿತು ಹುಣಸೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಶೈಕ್ಷಣಿಕ ಸಾಲ ಮನ್ನಾ, ಶಿರವಸ್ತ್ರ ಹೆಸರಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರ ಶಿಕ್ಷಣ ನಿರಾಕರಣೆ ಖಂಡಿಸಿ : ವಿವಿಧ ಸಂಘಟನೆಗಳಿಂದ ಪ್ರತಿಭಟನೆ

ಹಿಜಾಬ್-ಕೇಸರಿ ಪೈಟ್ ನಡುವೆ ಎಂಟ್ರಿಯಾದ ನೀಲಿ: ನೀಲಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು

ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದ ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳು

ಕಲಾವಿದೆಯರನ್ನು ವೇಶ್ಯಾವಾಟಿಕೆಗೆ ಪ್ರಚೋದಿಸಿದ ಆರ್ಕೇಸ್ಟ್ರಾ ಮಾಲಕ: ದೂರು ದಾಖಲು

ವಿಚ್ಛೇದನ ನೀಡಿಲ್ಲವೆಂದು ಪ್ರೀತಿಸಿ ಮದುವೆಯಾದವಳನ್ನೇ ಕೊಲೆಗೈದ ಪತಿ

ಇತ್ತೀಚಿನ ಸುದ್ದಿ

Exit mobile version