ಮೊದಲ ಮಳೆಗೆ ಸ್ಮಾರ್ಟ್ ಸಿಟಿ ಮಂಗಳೂರು ಕಂಡು ಬಂದಿದ್ದು ಹೀಗೆ…!
ಇಂದು ಮಧ್ಯಾಹ್ನದ ನಂತರ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆಗಳಲ್ಲಿ ಮಳೆ ಸುರಿದಿದೆ. ರಾತ್ರಿ ಆಗ್ತಿದ್ದಂತೆ. ಮಂಗಳೂರು ನಗರ ಮತ್ತು ವಿವಿಧ ತಾಲೂಕಿನ ವಿವಿಧೆಡೆ ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿದಿದೆ.
ವಾಯುಭಾರ ಕುಸಿತದಿಂದಾಗಿ ಮುಂಗಾರು ಪೂರ್ವ ಮಳೆಯು ಬಿರುಸು ಪಡೆದಿದ್ದು, ಗುಡುಗು, ಮಿಂಚು ಸಹಿತ ಮಳೆ ಸುರಿದಿದೆ. ನಗರದ ಸ್ಮಾರ್ಟ್ ಸಿಟಿ ಕಾಮಗಾರಿಯ ಅವಾಂತರಕ್ಕೆ ಈ ಮಳೆ ಸಾಕ್ಷಿಯಾಗಿದ್ದು, ಅನೇಕ ಕಡೆ ಮಳೆ ನೀರು ಸರಾಗವಾಗಿ ಹರಿದು ಹೋಗಲಾಗದೆ ರಸ್ತೆಯಲ್ಲೇ ನಿಂತಿವೆ.
ಇದರಿಂದ ಸಾರ್ವಜನಿಕರಿಗೆ, ವಾಹನ ಸವಾರರಿಗೆ ಸಮಸ್ಯೆಯಾಗಿದೆ. ಮಳೆಯ ಆರ್ಭಟಕ್ಕೆ ನಗರದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ. ಹಠಾತ್ ಸುರಿದ ಭಾರೀ ಮಳೆಯಿಂದಾಗಿ ದ್ವಿಚಕ್ರ ವಾಹನಿಗರಲ್ಲದೆ ಸಾರ್ವಜನಿಕರು ಸಕಾಲಕ್ಕೆ ವಾಸಸ್ಥಾನಕ್ಕೆ ತಲುಪಲಾಗದೆ ಪರದಾಡುವಂತಾಗಿದೆ. ಬಿಸಿಲಿನ ಬೇಗೆಯಿಂದ ಬಳಲಿದ ಜನತೆಗೆ ಮಳೆ ತಂಪು ನೀಡಿದ್ರೂ ಕೆಲವರಿಗೆ ತೊಂದರೆಯನ್ನುಂಟು ಮಾಡಿತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw