ತೋಟಕ್ಕೆ ತೆರಳಿದ್ದ ವ್ಯಕ್ತಿ ದಾರುಣ ಸಾವು
ಬೆಳ್ತಂಗಡಿ: ಮನೆಯಿಂದ ತೋಟಕ್ಕೆ ಹೋದ ವ್ಯಕ್ತಿಯೊಬ್ಬರು ತೋಟದಲ್ಲಿ ಸಾವನ್ನಪ್ಪಿದ ಘಟನೆ ಕಲ್ಮಂಜದಲ್ಲಿ ಇಂದು ಸಂಜೆ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಕರಿಯನೆಲದ ಕರ್ಬಿತ್ತಿಲ್ ನಿವಾಸಿ ಶೀನಪ್ಪ ಗೌಡರ ಮಗನಾದ ಉದಯ ಗೌಡ(43) ಎಂಬವರು ಇಂದು ತೋಟಕ್ಕೆ ಹೋದವರು ವಾಪಸ್ ಬಂದಿರಲ್ಲಿಲ್ಲ ಮನೆಮಂದಿ ಸುತ್ತಮುತ್ತ ಹುಡುಕಾಟ ನಡೆಸಿದಾಗ ಸಂಜೆ ವೇಳೆಗೆ ತೋಟದಲ್ಲಿ ಬಿದ್ದು ಸಾವನ್ನಪ್ಪಿರುವುದು ಕಂಡು ಬಂದಿದೆ. ಶವವನ್ನು ಶವಪರೀಕ್ಷೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಲಾಗಿದೆ.
ಈ ಬಗ್ಗೆ ಮನೆಮಂದಿ ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿದ್ದು ಧರ್ಮಸ್ಥಳ ಸಬ್ ಇನ್ಸ್ಪೆಕ್ಟರ್ ಅನಿಲ್ ಕುಮಾರ್ ಡಿ. ತಂಡ ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ. ಇವರು ಯಾವ ರೀತಿಯಾಗಿ ಮೃತಪಟ್ಟಿದ್ದಾರೆ ಎಂಬ ಬಗ್ಗೆ ಮರಣೋತ್ತರ ಪರೀಕ್ಷೆಯ ಬಳಿಕವಷ್ಟೆ ತಿಳಿದು ಬರಬೇಕಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka