ಕಾವೇರಿ, ಮಹದಾಯಿ, ಮೇಕೆದಾಟು: ಪ್ರಧಾನಿ ಬಳಿಗೆ ಸರ್ವ ಪಕ್ಷ ನಿಯೋಗ ಕರೆದೊಯ್ಯುವ ಚಿಂತನೆ ಇದೆ: ಸಿಎಂ ಸಿದ್ದರಾಮಯ್ಯ

23/08/2023
ಬೆಂಗಳೂರು: ಕಾವೇರಿ, ಮಹದಾಯಿ, ಮೇಕೆದಾಟು ವಿಚಾರದಲ್ಲಿ ನಾಡಿಗೆ ನ್ಯಾಯ ಒದಗಿಸುವ ಸಲುವಾಗಿ ಪ್ರಧಾನಿಯವರ ಬಳಿಗೆ ಸರ್ವ ಪಕ್ಷ ನಿಯೋಗ ಕರೆದೊಯ್ಯುವ ಚಿಂತನೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಕಾವೇರಿ, ಮೇಕೆದಾಟು ಮತ್ತು ಮಹಾದಾಯಿ ಜಲ ವಿವಾದಗಳ ಕುರಿತಂತೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ವಿರೋಧ ಪಕ್ಷದ ನಾಯಕರುಗಳ ಮತ್ತು ಸಂಸದರ ಅಭಿಪ್ರಾಯಗಳನ್ನು ಕೇಳಿಸಿಕೊಂಡ ಬಳಿಕ ಮಾತನಾಡಿದರು.
ಕನ್ನಡ ನಾಡು-ನುಡಿ-ಜಲ-ಭೂಮಿ-ಸಂಸ್ಕೃತಿಯ ಹಿತ ಕಾಪಾಡುವ ವಿಚಾರದಲ್ಲಿ ರಾಜಿಯ ಮಾತೇ ಇಲ್ಲ. 7 ಕೋಟಿ ಕನ್ನಡಿಗರ ಹಿತ ಕಾಪಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಸರ್ವ ಪಕ್ಷಗಳೂ ಒಟ್ಟಾಗಿ ಶ್ರಮಿಸೋಣ. ಹೀಗಾಗಿ ಸರ್ವ ಪಕ್ಷ ನಿಯೋಗಕ್ಕೆ ನಿಮ್ಮೆಲ್ಲರ ಸಹಕಾರ ಬೇಕು ಎಂದು ಮುಖ್ಯಮಂತ್ರಿಗಳು ಮನವಿ ಮಾಡಿದರು.
ಕಾವೇರಿ ಜಲಾನಯನ ಪ್ರದೇಶದಲ್ಲಿ ನಮ್ಮ ರೈತರ ಹಿತವನ್ನು ಸಂಪೂರ್ಣ ಕಾಪಾಡಿದ್ದೇವೆ. ನಮ್ಮ ಬೆಳೆ ರಕ್ಷಣೆಗೆ ಅಗತ್ಯ ಕ್ರಮ ಕೈಗೊಂಡಿದ್ದೇವೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.