ನನ್ನ ವಿರುದ್ಧ ಅಪಪ್ರಚಾರಕ್ಕಾಗಿ ಮಾಧ್ಯಮಗಳಿಗೆ ಕೋಟ್ಯಂತರ ರೂ. ವೆಚ್ಚ ಮಾಡಲಾಗಿದೆ: ರಾಹುಲ್ ಗಾಂಧಿ
ತುರುವೇಕೆರೆ: ನನ್ನ ವಿರುದ್ಧ ಅಪ ಪ್ರಚಾರಕ್ಕಾಗಿ ಕೋಟ್ಯಂತರ ರೂ. ವೆಚ್ಚ ಮಾಡಲಾಗಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶನಿವಾರ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಕೆಲವೊಂದು ಸಿದ್ದಾಂತಗಳಿಗೆ ನಾನು ಯಾವಾಗಲೂ ಬದ್ಧನಾಗಿರುತ್ತೇನೆ ಎಂಬುದು ಅರ್ಥವಾಗಿದೆ. ಹೀಗಾಗಿ ಬಿಜೆಪಿ, ಆರ್ ಎಸ್ ಎಸ್ ಮತ್ತಿತರ ಶಕ್ತಿಗಳು ಗೊಂದಲ ಸೃಷ್ಟಿಸುತ್ತಿವೆ. ತನ್ನ ವಿರುದ್ಧ ಅಪಪ್ರಚಾರಕ್ಕಾಗಿ ಮಾಧ್ಯಮಗಳಿಗಾಗಿ ಕೋಟ್ಯಂತರ ರೂ. ವೆಚ್ಚ ಮಾಡಲಾಗಿದೆ ಎಂದರು.
ನನ್ನ ಸತ್ಯ ಭಿನ್ನವಾಗಿದೆ. ಇದು ಯಾವಾಗಲೂ ಭಿನ್ನವಾಗಿರುತ್ತದೆ ಮತ್ತು ನನ್ನ ನಿಲುವು ಏನು ಮತ್ತು ಅದಕ್ಕಾಗಿ ನಾನು ಏನು ಮಾಡುತ್ತಿದ್ದೇನೆ ಎಂಬುದನ್ನು ಜನರು ಎಚ್ಚರಿಕೆಯಿಂದ ನೋಡುತ್ತಿದ್ದಾರೆ ಎಂದು ರಾಹುಲ್ ಹೇಳಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka