ಸುಟ್ಟು ಕರಕಲಾದ ಕಾರಲ್ಲಿ ಪತ್ತೆಯಾಯ್ತು ಮೂರು ಮೃತದೇಹಗಳು: ಬೆಚ್ಚಿಬಿದ್ದ ಜನ
![thumakur 1](https://www.mahanayaka.in/wp-content/uploads/2024/03/thumakur-1.jpg)
ತುಮಕೂರು: ತಾಲೂಕಿನ ಕುಚ್ಚಂಗಿ ಗ್ರಾಮದ ಕೆರೆಯಲ್ಲಿ ಕಾರೊಂದರಲ್ಲಿ ಮೂವರು ವ್ಯಕ್ತಿಗಳ ಮೃತದೇಹಗಳು ಸಂಪೂರ್ಣ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಕೆರೆ ಸಂಪೂರ್ಣ ಬತ್ತಿ ಹೋಗಿದ್ದು ಇದರ ಮಧ್ಯ ಭಾಗದಲ್ಲಿ ಕಾರು ಕೂಡ ಸುಟ್ಟು ಕರಕಲಾಗಿದೆ.
ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ತೆರಳಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ನೇತೃತ್ವದ ಪೊಲೀಸ್ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿದೆ. ಫೋರೆನ್ಸಿ ತಜ್ಞರ ತಂಡ ಕೂಡ ಸ್ಥಳದಲ್ಲಿ ಮೊಕ್ಕಂ ಹೂಡಿದ್ದು ಮಾಹಿತಿ ಸಂಗ್ರಹಿಸುತ್ತಿದೆ.
ಕಾರಿನ ನಂಬರ್ ಕೂಡ ಪತ್ತೆಯಾಗಿದ್ದು ಇದರ ಮೂಲಕ ಸುಟ್ಟು ಕರಕಲಾಗಿರುವ ಮೃತದೇಹಗಳ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ತಿಳಿಸಿದ್ದಾರೆ. ಈ ಸಂಬಂಧ ಕೋರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth