ನದಿಗೆ ಈಜಲು ಇಳಿದಿದ್ದ ಮೂವರು ಕಾರ್ಮಿಕರು ನೀರುಪಾಲು: ನೀರಿನ ಸುಳಿಯಲ್ಲಿ ಸಿಲುಕಿದ ಕಾರ್ಮಿಕರು - Mahanayaka
7:22 PM Thursday 12 - December 2024

ನದಿಗೆ ಈಜಲು ಇಳಿದಿದ್ದ ಮೂವರು ಕಾರ್ಮಿಕರು ನೀರುಪಾಲು: ನೀರಿನ ಸುಳಿಯಲ್ಲಿ ಸಿಲುಕಿದ ಕಾರ್ಮಿಕರು

kapila
26/03/2024

ಮೈಸೂರು:  ಕಪಿಲಾ ನದಿಗೆ ಈಜಲು ಇಳಿದಿದ್ದ ಮೂವರು ಕಾರ್ಮಿಕರು ನೀರಿನ ಸುಳಿಗೆ ಸಿಲುಕಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲೂಕಿನ ಗೊದ್ದನಪುರ ಗ್ರಾಮದ ಬಳಿ ನಡೆದಿದೆ.

ಮಿಲನ್(25) ಮೋಹನ್ (19) ತರುಣ್(19) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಈ ಮೂವರು ಕೂಡ ಬಿಹಾರ ಮೂಲದವರಾಗಿದ್ದು, ಮೈಸೂರಿನ ನೆಸ್ಲೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು.

ಬಿಸಿಲಿನ ಸೆಖೆಯ ಹಿನ್ನೆಲೆಯಲ್ಲಿ ಕಾರ್ಮಿಕರು ಕಪಿಲಾ ನದಿಗೆ ಈಜಲು ಇಳಿದಿದ್ದರು. ಈ ವೇಳೆ ನೀರಿನ ಸುಳಿಗೆ ಸಿಲುಕಿದ್ದು, ಸುಳಿಯಿಂದ ಹೊರಬರಲಾಗದೇ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

ಘಟನಾ ಸ್ಥಳಕ್ಕೆ ನಂಜನಗೂಡು ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಿಲನ್ ಎಂಬಾತನ ಮೃತದೇಹ ಪತ್ತೆಯಾಗಿದ್ದು, ಇನ್ನಿಬ್ಬರ ಮೃತದೇಹಗಳಿಗಾಗಿ ಶೋಧ ನಡೆಸಲಾಗುತ್ತಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ