ವಿಷಾಹಾರ ಸೇವಿಸಿ ಮೂವರು ಮಹಿಳೆಯರು ಸಾವು
ತುಮಕೂರು: ತಾಲೂಕು ಬುಳ್ಳಸಂದ್ರ ಗ್ರಾಮದಲ್ಲಿ ವಿಷಾಹಾರ ಸೇವಿಸಿ ಮೂವರು ಮಹಿಳೆಯರು ಮೃತಪಟ್ಟಿರುವ ಘಟನೆ ನಡೆದಿದೆ.
ಕಾಟಮ್ಮ(45), ತಿಮ್ಮಕ್ಕ(85), ಗಿರಿಯಮ್ಮ (38) ಮೃತಪಟ್ಟವರಾಗಿದ್ದಾರೆ. ವಿಷಾರಸೇವಿಸಿ ಸೇವಿಸಿ ಮೂವರು ಮೃತಪಟ್ಟಿರುವ ಶಂಕೆ ವ್ಯಕ್ತಪಡಿಸಲಾಗಿದೆ.
ಗ್ರಾಮದಲ್ಲಿ ನಡೆದ ಜಾತ್ರೆ ಬಳಿಕ 30ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ. ಮನೆಯಲ್ಲೇ ಅಡುಗೆ ಮಾಡಿ ಬಡಿಸಲಾಗಿತ್ತು. ಊಟ ಸೇವಿಸಿ ಗ್ರಾಮದ 18 ಮಹಿಳೆಯರು 12 ಪುರುಷರು ಅಸ್ವಸ್ತರಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಗ್ರಾಮದ ಶಾಲಾ ಆವರಣದಲ್ಲಿ ತಾತ್ಕಾಲಿಕ ಆಸ್ಪತ್ರೆ ತೆರೆಯಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಮಂಜುನಾಥ್ ಅವರ ಪ್ರಕಾರ ಬುಳ್ಳಸಂದ್ರದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಪ್ರಸಾದ ಸೇವಿಸಿದ ಕೆಲವರಲ್ಲಿ ವಾಂತಿ ಭೇದಿ ಕಾಣಿಸಿಕೊಂಡಿದೆ. ಆದರೆ ಸಾವು ಸಂಭವಿಸಿರುವುದು ಇದೇ ಕಾರಣಕ್ಕೆ ಎಂಬುದು ಸ್ಪಷ್ಟವಿಲ್ಲ ಮೃತಪಟ್ಟವರು ಹಾಗೂ ಅನಾರೋಗ್ಯಕ್ಕೆ ಒಳಗಾದವರ ಕುರಿತು ಪರೀಕ್ಷೆ ನಡೆಸುತ್ತಿದ್ದು ವರದಿ ಬಂದ ನಂತರವಷ್ಟೇ ಕಾರಣ ತಿಳಿಯಲಿದೆ ಎಂದು ತಿಳಿಸಿದ್ದಾರೆ.
ಮಧುಗಿರಿ ಉಪವಿಭಾಗಾಧಿಕಾರಿ ಶಿವಪ್ಪ ಅವರ ಪ್ರಕಾರ ಆರೋಗ್ಯ ಇಲಾಖೆ ವತಿಯಿಂದ ಆರೋಗ್ಯ ಉಪ ಕೇಂದ್ರ ಸ್ಥಾಪನೆ ಮಾಡಿ ಸ್ಥಳದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ಕೆಲವರನ್ನು ಕಳುಹಿಸಲಾಗಿದೆ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ತಿಳಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: