ಅಮಾನುಷ: ಮೂರು ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ
ಮಹಾರಾಷ್ಟ್ರದ ಪುಣೆಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಮೂರು ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ಆರೋಪಿಸಿ 9 ವರ್ಷದ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
ಈ ಮಕ್ಕಳಿಬ್ಬರ ಮನೆಗಳು ಹತ್ತಿರ ಹತ್ತಿರ ಇವೆ. ಆರೋಪಿ ಬಾಲಕ ಮೂರನೇ ತರಗತಿಯ ವಿದ್ಯಾರ್ಥಿ. ಮೂರು ವರ್ಷದ ಬಾಲೆಯ ಮನೆಯ ಸಮೀಪ ಈ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ವಿವರವನ್ನು ಈ ಬಾಲೆ ತನ್ನ ತಾಯಿಯೊಂದಿಗೆ ಹಂಚಿಕೊಂಡಿದ್ದಾಳೆ. ಬಳಿಕ ಪೊಲೀಸರಿಗೆ ಮಾಹಿತಿ ಹೋಗಿದೆ. ಆ ಬಳಿಕ ಮಗುವಿನಿಂದ ಹೆಚ್ಚುವರಿ ಮಾಹಿತಿಯನ್ನು ಸಂಗ್ರಹಿಸಲಾಗಿದೆ. ಆರೋಪಿ ಬಾಲಕನನ್ನು ಜುವನೈಲ್ ಜಸ್ಟಿಸ್ ಬೋರ್ಡ್ ನ ಮುಂದೆ ಹಾಜರುಪಡಿಸಲಾಗಿದೆ ಮತ್ತು ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ.
ಸೋಶಿಯಲ್ ಮೀಡಿಯಾದ ದುರುಪಯೋಗವೇ ಈ ಕೃತ್ಯಕ್ಕೆ ಕಾರಣ ಎಂದು ಪೊಲೀಸರು ಹೇಳಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj