“ತ್ರಿಶೂಲ ಕೊಟ್ರೆ ಮೊದಲ ಬೇಟೆ ನೀನೇ” | ಮಾಜಿ ಸಿಎಂ ಸಿದ್ದರಾಮಯ್ಯಗೆ ಜೀವ ಬೆದರಿಕೆ
ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಅವರು ಮಂಗಳೂರಿನಲ್ಲಿ “ಆಕ್ಷನ್ ಗೆ ರಿಯಾಕ್ಷನ್ ಇರುತ್ತದೆ” ಎನ್ನುವ ಹೇಳಿಕೆ ಬಿಜೆಪಿ ಪರಿವಾರಗಳ ಕಾರ್ಯಕರ್ತರಿಗೆ ಪ್ರೋತ್ಸಾಹ ನೀಡಿದಂತಾಗಿದೆಯೇ ಎನ್ನುವ ಅನುಮಾನಗಳು ಇದೀಗ ಮೂಡಿದ್ದು, ಇದೀಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah)ನವರಿಗೆ ಟ್ವಿಟ್ಟರ್ ನಲ್ಲಿ ಕೊಲೆ ಬೆದರಿಕೆ ಹಾಕಲಾಗಿದೆ.
ಸಿದ್ದರಾಮಯ್ಯನವರು ತ್ರಿಶೂಲ ಹಾಗೂ ಕಾಪು ಪೊಲೀಸರು ಧರಿಸಿದ್ದ ಕೇಸರಿ ವಸ್ತ್ರಕ್ಕೆ ಸಂಬಂಧಿಸಿದಂತೆ ಮಾಡಿದ್ದ ಟ್ವೀಟ್ ನ್ನು ಪ್ರಕಾಶ್ ಎಂಬಾತ ರೀ ಟ್ವೀಟ್ ಮಾಡಿ, ಕರ್ನಾಟಕದ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಯಾರ ಕೈಗೆ ಏನು ಕೊಡಬೇಕು ಎನ್ನುವುದು ಚೆನ್ನಾಗಿ ಗೊತ್ತು. ತ್ರಿಶೂಲ ಕೊಟ್ರೆ ಮೊದಲ ಬೇಟೆ ನೀನೇ ಎಂದು ರೀಟ್ವೀಟ್ ಮಾಡಿದ್ದಾನೆ.
ಸಿಎಂ ಬಸವರಾಜ್ ಬೊಮ್ಮಾಯಿ (Basavaraj Bommai)ಹಾಗೂ ಗೃಹ ಸಚಿವ ಅರಗಜ್ಞಾನೇಂದ್ರ (Araga Jnanendra) ಅವರು ಬಿಜೆಪಿ ಪರಿವಾರಗಳ ಯಾವುದೇ ಚಟುವಟಿಕೆಗಳ ಬಗ್ಗೆ ಮೃಧುಧೋರಣೆ ತಳೆಯುತ್ತಿದ್ದಾರೆ. ಇದು ಸಮಾಜಕ್ಕೆ ಕೆಟ್ಟ ಸಂದೇಶವನ್ನು ನೀಡುತ್ತಿದ್ದು, ಹೀಗಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟಾಗುತ್ತಿದೆ ಎನ್ನುವ ಆರೋಪಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ.
ಮಹಾನಾಯಕ(Mahanayaka) ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DvHWsFS1hwLKfIX9njyNyb
ಇನ್ನಷ್ಟು ಸುದ್ದಿಗಳು…
ಕಾರಿನ ಬದಲು ಅಡುಗೆ ಪಾತ್ರೆಯಲ್ಲಿ ಕಲ್ಯಾಣ ಮಂಟಪಕ್ಕೆ ಬಂದ ವಧುವರ!
ದೈತ್ಯ ಹೆಬ್ಬಾವನ್ನು ಕ್ರೇನ್ ನಲ್ಲಿ ಎತ್ತುತ್ತಿರುವ ವಿಡಿಯೋ ವೈರಲ್
ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಪಡೆದು ಮನೆಗೆ ಬಂದ ಬಳಿಕ ಸಾವು!
ಉಪ ಚುನಾವಣೆ ಮುಗಿದ ಬಳಿಕ ತೈಲ ಬೆಲೆ ಇಳಿಕೆ: ಬಸವರಾಜ್ ಬೊಮ್ಮಾಯಿ
ಜಾತಿನಿಂದನೆ ಪ್ರಕರಣ: ಕ್ರಿಕೆಟಿಗ ಯುವರಾಜ್ ಸಿಂಗ್ ಬಂಧನ, ಜಾಮೀನಿನ ಮೇಲೆ ಬಿಡುಗಡೆ
ಎಳೆನೀರು ಸೇವನೆಯಿಂದ ನಮ್ಮ ದೇಹಕ್ಕೆ ಆಗುವ ಅದ್ಬುತ ಪ್ರಯೋಜನಗಳು
ಮಹಿಳೆಯೊಂದಿಗಿನ ತನ್ನ ಖಾಸಗಿ ಚಿತ್ರವನ್ನು ವಾಟ್ಸಾಪ್ ಗ್ರೂಪ್ ಗೆ ಶೇರ್ ಮಾಡಿದ ಶಿಕ್ಷಕ!