ಗುಡುಗು ಮಳೆಯಾಗುವ ಮುನ್ಸೂಚನೆ: ಹೀಗಿದೆ ಹವಾಮಾನ ವರದಿ
ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ. ಕರಾವಳಿ ತೀರ ಭಾಗಗಳಲ್ಲಿ ಮತ್ತು ಧರ್ಮಸ್ಥಳ, ಚಾರ್ಮಾಡಿ ಸುತ್ತಮುತ್ತ ಭಾಗಗಳಲ್ಲಿ ಮಳೆ ಸ್ವಲ್ಪ ಜಾಸ್ತಿ ಇರಬಹುದು. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ.
ಕೊಡಗು, ಹಾಸನ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಉತ್ತಮ ಹಾಗೂ ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಬಳ್ಳಾರಿ, ರಾಯಚೂರು, ಯಾದಗಿರಿ, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಚಾಮರಾಜನಗರ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಹೆಚ್ಚಿನ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಆಗಸ್ಟ್ 3ರಿಂದ ಕರಾವಳಿ, ಮಲೆನಾಡು ಸೇರಿದಂತೆ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆಗಳಿದ್ದು, ಆಗಷ್ಟ್ 6 ಅಥವಾ 7ರಿಂದ ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ (ಗುಡುಗು ಸಾಧ್ಯತೆ ಇದೆ). ಹಿಂದೂಮಹಾಸಾಗರ ಹಾಗೂ ದಕ್ಷಿಣ ಅರಬ್ಬಿ ಸಮುದ್ರದಲ್ಲಿ ಮುಂಗಾರು ಮಾರುತಗಳ ಚಲನೆ ಮಂದವಾಗಿದೆ. ಪರಿಣಾಮ ಕಾದು ನೋಡಬೇಕಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth