ಟಿಂಬರ್ ಗೋದಾಮಿನಲ್ಲಿ ಭಾರೀ ಅಗ್ನಿ ಅನಾಹುತ: 11 ಮಂದಿ ಸಜೀವ ದಹನ - Mahanayaka
6:35 AM Wednesday 5 - February 2025

ಟಿಂಬರ್ ಗೋದಾಮಿನಲ್ಲಿ ಭಾರೀ ಅಗ್ನಿ ಅನಾಹುತ: 11 ಮಂದಿ ಸಜೀವ ದಹನ

fire
23/03/2022

ಸಿಕಂದರಾಬಾದ್: ಮರದ ಗೋದಾಮಿನಲ್ಲಿ ಭಾರೀ ಅಗ್ನಿ ಅನಾಹುತ ಸಂಭವಿಸಿ ಕನಿಷ್ಠ 11 ಮಂದಿ ವಲಸೆ ಕಾರ್ಮಿಕರು ಸಜೀವ ದಹನವಾಗಿರುವ ಘಟನೆ ಬುಧವಾರ ನಸುಕಿನ ವೇಳೆ ತೆಲಂಗಾಣದ ಸಿಕಂದರಾಬಾದ್‌ನಲ್ಲಿ ನಡೆದಿದೆ.

ಮುಂಜಾನೆ 4 ಗಂಟೆಯ ಸುಮಾರಿಗೆ ಮರದ ಗೋದಾಮಿನಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ ಪರಿಣಾಮ ಕೆಲವೇ ನಿಮಿಷಗಳಲ್ಲಿ ಒಣಗಿದ ಮರಕ್ಕೆ ಬೆಂಕಿ ಹೊತ್ತಿಕೊಂಡಿತ್ತು. ಈ ಸಂದರ್ಭದಲ್ಲಿ ವಲಸೆ ಕಾರ್ಮಿಕರು ಗೋದಾಮಿನೊಳಗೆ ಮಲಗಿದ್ದು, ಬೆಂಕಿಯ ಕೆನ್ನಾಲಗೆ ಸಿಲುಕಿ 11 ಮಂದಿ ಜೀವಂತವಾಗಿ ದಹನವಾಗಿರುವುದಾಗಿ ವರದಿ ವಿವರಿಸಿದೆ.

ಈ ಸಂದರ್ಭದಲ್ಲಿ 4-5 ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಓರ್ವ ಕಾರ್ಮಿಕನ ಸ್ಥಿತಿ ಚಿಂತಾಜನಕವಾಗಿದ್ದು, ಗಾಂಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ವರದಿ ತಿಳಿಸಿದೆ.

ಮೃತ ವಲಸೆ ಕಾರ್ಮಿಕರು ಬಿಹಾರ ಮೂಲದವರಾಗಿದ್ದಾರೆ. ತಕ್ಷಣ ಅಗ್ನಿಶಾಮಕದಳ ಧಾವಿಸಿದ್ದು, ಬೆಂಕಿಯನ್ನು ನಂದಿಸುವ ಕಾರ್ಯ ಮುಂದುವರಿದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಉತ್ತರ ಪ್ರದೇಶ: ಗುಂಡಿಟ್ಟು ಬಿಜೆಪಿ ನಾಯಕನ ಹತ್ಯೆ

ವಿಶ್ವದ ನಂಬರ್ 1 ಟೆನಿಸ್‌ ಆಟಗಾರ್ತಿ ಆಶ್ಲೆ ಬಾರ್ಟಿ ನಿವೃತ್ತಿ

‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಮೂಲಕ ಜನರನ್ನು ಸಂಘ ಪರಿವಾರ ಬೇರ್ಪಡಿಸುತ್ತಿದೆ: ಬೃಂದಾ ಕಾರಟ್ ಆರೋಪ

ಮುಸ್ಲಿಮ್ ವ್ಯಾಪಾರಿಗಳಿಗೆ ಬಹಿಷ್ಕಾರ: ಪಾಪ್ಯುಲರ್ ಫ್ರಂಟ್ ಪ್ರತಿಕ್ರಿಯೆ ಏನು?

ಇತ್ತೀಚಿನ ಸುದ್ದಿ