ಟಿಪ್ಪು ಹೆಸರಿನಲ್ಲಿ ನಿತ್ಯ ಸಲಾಂ ಮಂಗಳಾರತಿ ಬೇಡ: ಕೊಲ್ಲೂರು ದೇವಾಲಯಕ್ಕೆ ಮನವಿ - Mahanayaka
6:17 AM Friday 20 - September 2024

ಟಿಪ್ಪು ಹೆಸರಿನಲ್ಲಿ ನಿತ್ಯ ಸಲಾಂ ಮಂಗಳಾರತಿ ಬೇಡ: ಕೊಲ್ಲೂರು ದೇವಾಲಯಕ್ಕೆ ಮನವಿ

kolluru
26/03/2022

ಕೊಲ್ಲೂರು: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಟಿಪ್ಪುವಿನ ಹೆಸರಿನಲ್ಲಿ ಪ್ರತೀ ದಿನ ನಡೆಯುತ್ತಿರುವ ಸಲಾಂ ಮಹಾಮಂಗಳಾರತಿಯ ಹೆಸರನ್ನು ತೆಗೆಸಬೇಕೆಂದು ವಿಶ್ವ ಹಿಂದೂ ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪ್‍ವೆಲ್ ನೇತೃತ್ವದಲ್ಲಿ ದೇವಾಲಯದ ಅಧಿಕಾರಿಗಳ ಬಳಿ ಮನವಿ ಮಾಡಿದ್ದಾರೆ.

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನವು ಐತಿಹಾಸಿಕ ಹಿನ್ನೆಲೆ ಇರುವ ಪವಿತ್ರ ಕ್ಷೇತ್ರ ಭಾರತದ 108 ಶಕ್ತಿ ಪೀಠಗಳಲ್ಲಿ ಒಂದು. ಇಂತಹ ಪುಣ್ಯ ಕ್ಷೇತ್ರದಲ್ಲಿ ಒಬ್ಬ ಕ್ರೂರಿ, ಮತಾಂಧ, ಹಿಂದೂ ವಿರೋಧಿ, ಕನ್ನಡ ವಿರೋಧಿ ಸಾವಿರಾರು ಹಿಂದೂಗಳನ್ನು ನರಮೇಧ ಮಾಡಿ, ನೂರಾರು ದೇವಸ್ಥಾನಗಳನ್ನು ದ್ವಂಸಗೊಳಿಸಿದಂತಹ ಟಿಪ್ಪುವಿನ ಹೆಸರಿನಲ್ಲಿ ಪ್ರತೀ ದಿನ ರಾತ್ರಿ 8 ಗಂಟೆಗೆ ದೇವಿ ಮೂಕಾಂಬಿಕೆಗೆ ಸಲಾಂ ಎಂಬ ಹೆಸರಿನಲ್ಲಿ ಮಹಾಮಂಗಳಾರತಿಯಾಗುವುದು ಕ್ಷೇತ್ರದ ಪಾವಿತ್ರತೆಗೆ ಧಕ್ಕೆ ತರುತ್ತಿದೆ.

ಸಲಾಂ ಎಂಬ ಹೆಸರಿನಲ್ಲಿ ಪ್ರತಿ ನಿತ್ಯ ದೇವಿಗೆ ಮಹಾಮಂಗಳಾರತಿಯಾಗುವುದು ಗುಲಾಮಗಿರಿಯ ಸಂಕೇತವಾಗಿದೆ ಆದರಿಂದ ತಕ್ಷಣ ಕ್ಷೇತ್ರದ ವ್ಯವಸ್ಥಾಪನಾ ಮಂಡಳಿ ಮತ್ತು ಧಾರ್ಮಿಕ ದತ್ತಿ ಇಲಾಖೆ ಇದನ್ನು ಗಂಭೀರವಾಗಿ ಪರಿಗಣಿಸಿ ಸಲಾಂ ಹಸರನ್ನು ತೆಗೆದು ಕೇವಲ ದೇವರ ಹೆಸರಲ್ಲಿ ಮಹಾಮಂಗಳಾರತಿ ಮಾಡಲು ಕ್ರಮತೆಗೆದುಕೊಳ್ಳಬೇಕೆಂದು ಶ್ರೀಕ್ಷೇತ್ರದ ಕೋಟ್ಯಂತರ ಭಕ್ತರ ಪರವಾಗಿ ವಿಶ್ವ ಹಿಂದೂ ಪರಿಷತ್ ಆಗ್ರಹಿಸುತ್ತದೆ.


Provided by

ಈ ಹಿನ್ನಲೆಯಲ್ಲಿ ನಾವು ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಿಗೆ, ಕಾರ್ಯ ನಿರ್ವಹಣಾಧಿಕಾರಿಗಳಿಗೆ, ದತ್ತಿ ಇಲಾಖೆ ಸಚಿವರಾದ ಶ್ರೀಮತಿ ಶಶಿಕಲಾ ಜೊಲ್ಲೆಯವರಿಗೆ, ಮಾನ್ಯ ಜಿಲ್ಲಾಧಿಕಾರಿಗಳಿಗೆ, ದತ್ತಿ ಇಲಾಖೆ ಆಯುಕ್ತರಾದ ಮಾನ್ಯ ಶ್ರೀಮತಿ ರೋಹಿಣಿ ಸಿಂಧೂರಿಯವರಿಗೆ ಮನವಿಯನ್ನು ಸಲ್ಲಿಸಿದ್ದು, ಕರ್ನಾಟಕ ಸರಕಾರ ಈ ಬಗ್ಗೆ ಗಮನ ಹರಿಸಿ ಕ್ರಮ ಕೈಗೊಳ್ಳಲು ಬಲವಾಗಿ ಆಗ್ರಹಿಸುತ್ತವೆ ಎಂದು ಮನವಿಯಲ್ಲಿ ತಿಳಿಸಿದೆ.

ಸಲಾಂ ಮಂಗಳಾರತಿ: ಟಿಪ್ಪು ಸುಲ್ತಾನ್ ಆಗಮಿಸಿದ ನೆನಪಿನಲ್ಲಿ ಇಂದಿಗೂ ನಿತ್ಯ ಕೊಲ್ಲೂರು ದೇವಾಲಯದಲ್ಲಿ ಸಲಾಂ ಮಂಗಳಾರತಿ ನಡೆಯುತ್ತಿದೆ. ಶ್ರೀ ಕ್ಷೇತ್ರಕ್ಕೆ 1765ರಿಂದ 1795ರ ನಡುವೆ ಟಿಪ್ಪು ಸುಲ್ತಾನ್ ಭೇಟಿ ನೀಡಿ, ಪೂಜೆ ಸಲ್ಲಿಸಿದ್ದ. ದೇವಿ ದರ್ಶನ ಮಾಡುವಾಗ ಮೂಲ ವಿಗ್ರಹಗಳು ಟಿಪ್ಪು ಸುಲ್ತಾನನಿಗೆ ಸ್ಪಷ್ಟವಾಗಿ ಕಾಣಿಸಿರಲಿಲ್ಲವಂತೆ.

ಟಿಪ್ಪು ಸುಲ್ತಾನ್ ಭೇಟಿ ಬಳಿಕ ಇಂದಿನವರೆಗೂ ಪ್ರತಿ ದಿನ ರಾತ್ರಿ 8 ರಿಂದ 8.15ರ ನಡುವೆ ಪರಿವಾರ ದೇವತೆಗಳ ಪೂಜೆ ಬಳಿಕ ನಡೆಯುವ ಮಂಗಳಾರತಿ (ಸುತ್ತು ಸಲಾಂ) ಪೂಜೆಗೆ ಸಲಾಂ ಮಂಗಳಾರತಿ ಎನ್ನುವ ಹೆಸರು ಉಳಿದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

8 ವರ್ಷದ ಬಾಲಕಿಯ ತಲೆ ಕತ್ತರಿಸಿ ರುಂಡದೊಂದಿಗೆ ಗ್ರಾಮದಲ್ಲಿ ತಿರುಗಾಡಿದ ಆರೋಪಿಯ ಬಂಧನ

ಗಡಿ ವಿವಾದ: ಸಿಎಂ ಬೊಮ್ಮಾಯಿ ವಿರುದ್ಧ ಮಹಾರಾಷ್ಟ್ರದಲ್ಲಿ ಖಂಡನಾ ನಿರ್ಣಯ

ಅತಿಥಿ ಶಿಕ್ಷಕಿಯ ಮೃತದೇಹ ಮಠದ ಬಾವಿಯಲ್ಲಿ ಪತ್ತೆ

ಪಾವಗಡ ಬಸ್ ಅಪಘಾತ ಪ್ರಕರಣ: 7ಕ್ಕೆ ಏರಿಕೆಯಾದ ಮೃತರ ಸಂಖ್ಯೆ

ಇತ್ತೀಚಿನ ಸುದ್ದಿ