ಟಿಪ್ಪು ಸುಲ್ತಾನ್ ಫ್ಲೆಕ್ಸ್ ಹರಿದು ಹಾಕಿದ ಕಿಡಿಗೇಡಿಗಳು

ಬೆಂಗಳೂರು: ನಗರದ ಕೆ.ಆರ್.ಸರ್ಕಲ್ ಹಾಗೂ ಹಡ್ಸನ್ ಸರ್ಕಲ್ ನಲ್ಲಿ ಅಳವಡಿಸಲಾಗಿದ್ದ ಟಿಪ್ಪು ಭಾವ ಚಿತ್ರದ ಫ್ಲೆಕ್ಸ್ ನ್ನು ಕಿಡಿಗೇಡಿಗಳು ರಾತ್ರಿ ವೇಳೆ ಹರಿದು ಹಾಕಿದ ಘಟನೆ ನಡೆದಿದೆ.
ಹಲವಾರ ವಿವಾದಗಳಲ್ಲಿ ಗುರುತಿಸಿಕೊಂಡಿರುವ ಪುನೀತ್ ಕೆರೆ ಹಳ್ಳಿ ಹಾಗೂ ತಂಡ ಈ ಕೃತ್ಯ ನಡೆಸಿದ್ದು, ಸಾವರ್ಕರ್ ಭಾವ ಚಿತ್ರವನ್ನು ಹರಿದು ಹಾಕಿದ್ದಾರೆ. ಅದಕ್ಕೆ ನಾವು ಟಿಪ್ಪು ಫ್ಲೆಕ್ಸ್ ನ್ನು ಹರಿದು ಹಾಕಿದ್ದೇವೆ ಎಂದು ತಂಡ ಸಮರ್ಥಿಸಿಕೊಂಡಿರುವುದಾಗಿ ವರದಿಯಾಗಿದೆ.
ಈ ಘಟನೆಗೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಹಡ್ಸನ್ ಸರ್ಕಲ್ ಮಾತ್ರವಲ್ಲ ಒಟ್ಟು ಎರಡು ಕಡೆಗಳಲ್ಲಿ ಬ್ಯಾನರ್ ಹರಿಯಲಾಗಿದೆ. ಪೊಲೀಸರ ಭದ್ರತೆ ನಡುವೆಯೂ ಈ ಕೃತ್ಯ ನಡೆದಿದೆ. ಕಾನೂನು ರೀತಿ ಕ್ರಮ ಕೈಗೊಳ್ಳೋದಾಗಿ ಪೊಲೀಸರು ಹೇಳಿದ್ದಾರೆ. ಕೂಡಲೇ ಕ್ರಮಕೈಗೊಳ್ಳಬೇಕು. ಇಲ್ಲದಿದ್ದರೆ ಪರಿಸ್ಥಿತಿ ಬೇರೆಯದ್ದಾಗಿರುತ್ತದೆ ಎಂದು ಎಚ್ಚರಿಸಿದ್ದಾರೆ.
ಈ ಬಗ್ಗೆ ಕಾನೂನಾತ್ಮಕವಾಗಿ ಹೋರಾಟ ಮಾಡುತ್ತೇವೆ. ದೇಶಕ್ಕಾಗಿ ಹೋರಾಡಿದವರ ಚರಿತ್ರೆ ಓದಿದ್ದೇವೆ. ರಾಷ್ಟ್ರಪತಿಯಾಗಿದ್ದ ರಾಮನಾಥ್ ಕೋವಿಂದ್ ಅವರು ಕೂಡ ಬಂದು ಪಾಠ ಹೇಳಿದ್ದಾರೆ. ಆದರೆ ಇವತ್ತು ಟಿಪ್ಪು ಸುಲ್ತಾನ್ ಭಾವಚಿತ್ರ ಇರುವ ಬ್ಯಾನರ್ ಅನ್ನು ಕಿಡಿಗೇಡಿಗಳು ಹರಿದು ಹಾಕಿದ್ದಾರೆ. ನಾನು ಘಟನಾ ಸ್ಥಳಕ್ಕೆ ಬಂದು ನೋಡಿದ್ದೇನೆ. ಪೊಲೀಸರು ಕಾವಲು ನಡುವೆ ಹರಿದು ಹೋಗಿದ್ದಾರೆ ಎಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka