EVM ಮೆಷಿನ್ ಸಾಗಿಸುತ್ತಿದ್ದ ಕ್ಯಾಂಟರ್ ವಾಹನದ ಟೈರ್ ಸ್ಫೋಟ

27/04/2024
ಕೋಲಾರ(Kolar): EVM ಮೆಷಿನ್ ಸಾಗಿಸುತ್ತಿದ್ದ ಕ್ಯಾಂಟರ್ ವಾಹನದ ಟೈರ್ ಸ್ಫೋಟಗೊಂಡ ಘಟನೆ ಕೋಲಾರದಲ್ಲಿ ನಡೆದಿದ್ದು, ಮುಳಬಾಗಿಲಿನಿಂದ ಕೋಲಾರದ ಸ್ಟ್ರಾಂಗ್ ರೂಂಗೆ ಇವಿಎಂ ಸಾಗಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ.
ಕೋಲಾರ ತಾಲೂಕು ವಡಗೂರ್ ಗೇಟ್ ಬಳಿ ಟೈರ್ ಬ್ಲಾಸ್ಟ್ ಆಗಿದೆ. ಪರಿಣಾಮ ಸುಮಾರು 1 ಗಂಟೆಗಳ ಕಾಲ ವಾಹನ ರಸ್ತೆಯಲ್ಲಿಯೇ ನಿಲ್ಲುವಂತಾಗಿದೆ.
ಕ್ಯಾಂಟರ್ ಸೀಲ್ ಮಾಡಿರುವುದರಿಂದ ವಾಹನ ರಿಪೇರಿಯಾದ ನಂತರ ಸ್ಟ್ರಾಂಗ್ ರೂಂಗೆ ರವಾನೆ ಮಾಡಲಾಗಿದೆ. ವಾಹನದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿತ್ತು. ತಹಶೀಲ್ದಾರ್ ಹಾಗೂ ಪೊಲೀಸ್ ಸಿಬ್ಬಂದಿ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದರು.