ತಿಥಿಗೆ ಬಂದಿದ್ದ ವ್ಯಕ್ತಿ ಕಾಲು ಜಾರಿ ಕೆರೆಗೆ ಬಿದ್ದು ಸಾವು
06/01/2023
ಚಾಮರಾಜನಗರ: ವ್ಯಕ್ತಿಯೊಬ್ಬರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಳಂದೂರು ತಾಲೂಕಿನ ಕೆಸ್ತೂರು ಗ್ರಾಮದಲ್ಲಿ ನಡೆದಿದೆ.
ಮೈಸೂರು ಮೂಲದ 50 ವರ್ಷದ ಮಂಜು ಮೃತ ದುರ್ದೈವಿ. ಗ್ರಾಮದ ಜಯಮ್ಮ ಎಂಬವರ 11ನೇ ದಿನದ ಪುಣ್ಯ ತಿಥಿಗೆ ಬಂದಿದ್ದ ಮಂಜು ಅವರು ಬಹಿರ್ದೆಸೆಗೆ ಹೋಗಿದ್ದ ವೇಳೆ ಕೆರೆಗೆ ಕಾಲು ಜಾರಿ ಬಿದ್ದಿದ್ದಾರೆ ಎನ್ನಲಾಗಿದೆ.
ಯಳಂದೂರು ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw