ನಿಂತಿಲ್ಲ ಟೋಲ್ ಗೇಟ್ ವಿರೋಧಿ ಹೋರಾಟ: ಅಹೋರಾತ್ರಿ ಪ್ರತಿಭಟನೆ ನಡೆಸಲು ನಿರ್ಧಾರ

surathkal
19/10/2022

ಮಂಗಳೂರಿನ ಸುರತ್ಕಲ್ ಟೋಲ್ ಗೇಟ್ ವಿರುದ್ಧ ಹೋರಾಟ ತೀವ್ರಗೊಳಿಸಲು ಅಣಿಯಾಗಿರುವ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯು ಅಕ್ಟೋಬರ್ 28ರಿಂದ ಟೋಲ್ ಗೇಟ್ ಎದುರು ಅಹೋರಾತ್ರಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ.

ಇಂದು ಸುರತ್ಕಲ್ ವಿಶ್ವಕರ್ಮ ಕಲ್ಯಾಣ ಮಂಟಪದಲ್ಲಿ ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಈ ಸಭೆಯಲ್ಲಿ ವಕೀಲ ದಿನೇಶ್ ಹೆಗ್ಡೆ ಉಳೆಪಾಡಿ, ಬಿ.ಕೆ.ಇಮ್ತಿಯಾಝ್, ಪುರುಷೋತ್ತಮ ಚಿತ್ರಾಪುರ, ಟಿ.ಎನ್.ರಮೇಶ್, ದೇವದಾಸ್, ರಘು ಎಕ್ಕಾರು, ರಾಜೇಶ್ ಕುಳಾಯಿ, ಶ್ರೀನಾಥ್ ಕಾಟಿಪಳ್ಳ, ಕಿಶೋರ್ ಶೆಟ್ಟಿ ಮುಲ್ಕಿ, ರಾಜೇಶ ಶೆಟ್ಟಿ ಪಡ್ರೆ ಸೇರಿದಂತೆ ಹೋರಾಟ ಸಮಿತಿಯ ಪ್ರಮುಖರು ಭಾಗವಹಿಸಿದ್ದರು. ಈ ನಡುವೆ ಸುರತ್ಕಲ್ ಟೋಲ್ ಗೇಟ್ ನಲ್ಲಿ ಎಂದಿನಂತೆ ಟೋಲ್ ಸಂಗ್ರಹ ಮುಂದುವರಿದಿದೆ. ಸ್ಥಳದಲ್ಲಿ ಎರಡು ಕೆ.ಎಸ್.ಆರ್.ಪಿ. ತುಕಡಿಗಳು ಮತ್ತು ಸುರತ್ಕಲ್ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇತೃತ್ವದಲ್ಲಿ ಸುಮಾರು 100 ಪೊಲೀಸರನ್ನು ನಿಯೋಜಿಸಲಾಗಿದೆ.

YouTube video player

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version