ಜನರಿಗೆ ಗಾಯದ ಮೇಲೆ ಮತ್ತೊಂದು ಬರೆ: ಟೊಮೊಟೊ ದರ ಇದ್ದಕ್ಕಿದ್ದಂತೆ ಏರಿಕೆ: ಕಾರಣವೇನು ಗೊತ್ತಾ..?
ಈಗಾಗಲೇ ಗ್ಯಾಸ್, ಪೆಟ್ರೋಲ್ ಹಾಗೂ ದಿನಬಳಕೆಯ ವಸ್ತುಗಳ ಬೆಲೆ ಏರಿಕೆಯ ಬಿಸಿಯಿಂದ ತತ್ತರಿಸಿದ ಜನರಿಗೆ ಇದೀಗ ಟೊಮೆಟೊ ದರ ಏರಿಕೆಯು ಗಾಯದ ಮೇಲೆ ಬರೆ ಎಳೆದಂತಾಗಿದೆ. ಯಾಕೆಂದರೆ ದೇಶದ ಹಲವಾರು ರಾಜ್ಯಗಳಲ್ಲಿ ಟೊಮೆಟೊ ಬೆಲೆ ಹೆಚ್ಚಾಗಿದೆ. ಚಿಲ್ಲರೆ ಮಾರುಕಟ್ಟೆಗಳಲ್ಲಿ 100 ರೂಪಾಯಿ ಗಡಿಯನ್ನು ದಾಟಿದೆ.
ಕಿಲೋಗ್ರಾಂಗೆ 20ರಿಂದ 30 ರೂಪಾಯಿ ಧಾರಣೆ ಇದ್ದ ಟೊಮೆಟೊ ದರವು ಈಗ 80-120 ರೂಪಾಯಿಗೆ ಜಿಗಿದಿದೆ. ಮಾರುಕಟ್ಟೆಗೆ ಟೊಮೆಟೊ ಪೂರೈಕೆಯಲ್ಲಿ ಗಣನೀಯ ಇಳಿಮುಖವಾಗಿರುವುದೇ ಬೆಲೆ ಏರಿಕೆಗೆ ಕಾರಣ.
ಟೊಮೆಟೊ ಅಧಿಕವಾಗಿ ಬೆಳೆಯುವ ರಾಜ್ಯಗಳಲ್ಲಿ ಭಾರೀ ಮಳೆ ಹಾಗೂ ಪ್ರವಾಹದ ಕಾರಣದಿಂದಾಗಿ ಅದರ ಪೂರೈಕೆ ಕಡಿಮೆಯಾಗಿದೆ.
ಕಳೆದ ಕೆಲವು ದಿನಗಳಿಂದ ದಕ್ಷಿಣದ ರಾಜ್ಯಗಳಾದ ಕರ್ನಾಟಕ, ತೆಲಂಗಾಣ ಹಾಗೂ ಕೆಲವು ಪರ್ವತ ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಇದರಿಂದಾಗಿ ಟೊಮೆಟೊ ಬೆಳೆಗೆ ಹಾನಿಯಾಗಿದೆ ಮತ್ತು ಮಾರುಕಟ್ಟೆಗೆ ಅವುಗಳ ಪೂರೈಕೆಯಲ್ಲಿ ಕೊರತೆಯುಂಟಾಗಿದೆ ಎಂದು ಅವರು ಹೇಳಿದ್ದಾರೆ.
ಮುಂದಿನ ಒಂದೆರಡು ದಿನಗಳಲ್ಲಿ ಟೊಮೆಟೊ ಬೆಲೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎಂದು ಮಾರುಕಟ್ಟೆ ಪರಿಣಿತರು ಹೇಳಿದ್ದಾರೆ. ಇನ್ನು ಕೆಲವು ರಾಜ್ಯಗಳಲ್ಲಿ ತೀವ್ರವಾದ ಬಿಸಿಗಾಳಿಯಿಂದಾಗಿ ಟೊಮೆಟೊ ಉತ್ಪಾದನೆ ಕುಂಠಿತಗೊಂಡಿರುವುದು ಕೂಡಾ ಬೆಲೆಏರಿಕೆ ಇನ್ನೊಂದು ಕಾರಣವೆಂದು ತಜ್ಞರು ಅಂದಾಜಿಸಿದ್ದಾರೆ.
ವಿವಿಧ ಕಾರಣಗಳಿಂದಾಗಿ ಈ ವರ್ಷ ರೈತರು ಟೊಮೆಟೊ ಕೃಷಿಯನ್ನು ಕಡಿಮೆ ಪ್ರಮಾಣದಲ್ಲಿ ಬೆಳೆದಿದ್ದಾರೆಂದು ಅವಶ್ಯಕ ವಸ್ತುಗಳ ತಜ್ಞ ಅಜಯ್ ಕೆಡಿಯಾ ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw