ಕುಕ್ಕೆ ಸುಬ್ರಹ್ಮಣ್ಯ ಸಹಿತ ವಿವಿಧೆಡೆಗಳಲ್ಲಿ ಧಾರಾಕಾರ ಮಳೆ
ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿಂದು ಒಂದು ಗಂಟೆಗೂ ಅಧಿಕ ಸಮಯ ಧಾರಾಕಾರ ಮಳೆ ಸುರಿಯಿತು. ಕುಕ್ಕೆ ಸುಬ್ರಹ್ಮಣ್ಯ ಹಾಗೂ ಅಕ್ಕ-ಪಕ್ಕದ ಪರಿಸರದಲ್ಲಿ ಒಂದು ಗಂಟೆಗೂ ಅಧಿಕ ಸಮಯ ಗಾಳಿ, ಗುಡುಗು ಸಹಿತ ಧಾರಾಕಾರ ಮಳೆಯಾಯಿತು.
ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲಮೊಗ್ರು ಕಲ್ಮಕಾರು, ಹರಿಹರ ಪಲ್ಲತ್ತಡ್ಕ, ಐನೆಕಿದು, ಗುತ್ತಿಗಾರು, ಬಳ್ಪ, ಯೇನೆಕಲ್ಲು, ಕೈಕಂಬ, ಪಂಜ ಸೇರಿದಂತೆ ಕೆಲವೆಡೆ ಉತ್ತಮ ಮಳೆಯಾಗಿದೆ. ಸುಳ್ಯದಲ್ಲಿ ಕೇವಲ ಐದು ನಿಮಿಷದ ಹನಿ ಮಳೆಯಾಗಿದ್ದು, ಬಳಿಕ ಮೋಡ ಕವಿದ ವಾತವರಣ ಕಂಡುಬಂತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw