ಮಲೆನಾಡಲ್ಲಿ ಧಾರಾಕಾರ ಆಲಿಕಲ್ಲು ಮಳೆ, ಧರೆಗುರುಳಿದ ಮರ, ಟ್ರಾಫಿಕ್ ಜಾಮ್
ಚಿಕ್ಕಮಗಳೂರು: ಕಾದ ಕಾವಲಿಯಂತಾಗಿದ್ದ ಜಿಲ್ಲೆಯ ಮಲೆನಾಡು ಭಾಗಕ್ಕೆ ವರುಣದೇವ ಕೃಪೆ ತೋರಿದ್ದು, ಕಳೆದೊಂದು ಗಂಟೆಯಿಂದ ಮೂಡಿಗೆರೆ ತಾಲೂಕಿನ ಸುತ್ತಮುತ್ತ ಧಾರಾಕಾರವಾಗಿ ಆಲಿಕಲ್ಲು ಮಳೆ ಸುರಿಯುತ್ತಿತ್ತು ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.
ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್, ಬಣಕಲ್ ಬಾಳೂರು, ಹೊರಟ್ಟಿ, ಸಬ್ಬೇನಹಳ್ಳಿ ಸೇರಿದಂತೆ ಸುತ್ತಮುತ್ತ ಆಲಿಕಲ್ಲು ಸಮೇತ ಭಾರೀ ಮಳೆ ಸುರಿಯುತ್ತಿದೆ. ಮಳೆಗಾಗಿ ಆಕಾಶ ನೋಡುತ್ತಿದ್ದ ಮಲೆನಾಡಿಗರ ಮೊಗದಲ್ಲಿ ಮಂದಹಾಸ ಮೂಡಿದೆ. ಭಾರಿ ಮಳೆ-ಗಾಳಿಯಿಂದ ಕೊಟ್ಟಿಗೆಹಾರ ಹಾಗೂ ಚಾರ್ಮಾಡಿ ಘಾಟಿಯಲ್ಲಿ ಅಲ್ಲಲ್ಲಿ ವಾಹನದಟ್ಟಣೆ ಕೂಡ ಉಂಟಾಗಿದೆ.
ಮಲೆನಾಡಿಗರಿಗೆ ಮಳೆ ತೀರಾ ಅನಿವಾರ್ಯವಾಗಿತ್ತು. ಮಳೆ ಇಲ್ಲದೆ ಬೆಳೆಗಾರರಿಗೆ ಕಾಫಿ, ಅಡಿಕೆ ಹಾಗೂ ಮೆಣಸನ್ನ ಉಳಿಸಿಕೊಳ್ಳುವುದೇ ಕಷ್ಟವಾಗಿತ್ತು. ಬೆಳೆಗಳಿಗೆ ನಿತ್ಯ ನೀರಿನ ಸೌಲಭ್ಯ ಕಲ್ಪಿಸುವುದು ಅಸಾಧ್ಯವಾಗಿತ್ತು. ಕಳೆದ ವರ್ಷ ಈ ವೇಳೆಯಲ್ಲಿ ಮಲೆನಾಡಲ್ಲಿ ಸಮೃದ್ಧ ಮಳೆಯಾಗಿತ್ತು. ಹಾಗಾಗಿ, ಮೇ ಮುಗಿಯುವ ಹಂತಕ್ಕೆ ಬಂದರೂ ಮಳೆಯಾಗದ್ದನ್ನ ಕಂಡು ಮಲೆನಾಡಿಗರು ಆತಂಕಕ್ಕೀಡಾಗಿದ್ದರು.
ನಿತ್ಯ ಸಂಜೆ ವೇಳೆಗೆ ಮೋಡ ಕಡುಗಟ್ಟುತ್ತಿದ್ದರು ಮಳೆಯಾಗುತ್ತಿರಲಿಲ್ಲ. ಇದೀಗ, ಭಾರೀ ಗುಡುಗು-ಸಿಡಿಲಿನ ಸಮೇತ ಧಾರಾಕಾರವಾಗಿ ಆಲುಕಲ್ಲು ಮಳೆ ಸುರಿಯುತ್ತಿದ್ದು ಮಲೆನಾಡಿಗರು ಸಂತಸಗೊಂಡಿದ್ದಾರೆ. ಭಾರಿ ಮಳೆಯಿಂದ ಮಲೆನಾಡಿನ ಕೆಲಭಾಗದಲ್ಲಿ ಮರಗಳು ರಸ್ತೆಗೆ ಉಳಿರುವುದರಿಂದ ಗ್ರಾಮೀಣ ಭಾಗದ ಸಂಪರ್ಕ ಕವಿತಗೊಂಡಿದೆ.
ವಿದ್ಯುತ್ ತಂತಿಗಳ ಮೇಲೆ ಮಳೆ ಗಾಳಿಗೆ ಮರಗಳು ಬಿದ್ದ ಪರಿಣಾಮ ಗ್ರಾಮೀಣ ಭಾಗದಲ್ಲಿ ಅಲ್ಲಲ್ಲೆ ವಿದ್ಯುತ್ ಸಂಪರ್ಕ ಕೂಡ ಕಡಿತಗೊಂಡಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw