ಚಿಕ್ಕಮಗಳೂರಿನ ವಿವಿಧೆಡೆ ಗುಡುಗು ಸಹಿತ ಧಾರಾಕಾರ ಮಳೆ!
ಚಿಕ್ಕಮಗಳೂರು: ಬಿಸಿಲಿನಿಂದ ಕಾದ ಕಾವಲಿಯಂತಾಗಿದ್ದ ಬಯಲುಸೀಮೆಯಲ್ಲಿ ಅಕಾಲಿಕ ಮಳೆಯಾಗಿದ್ದು, ಗುಡುಗು ಸಹಿತ ಜೋರಾದ ಮಳೆ ಸುರಿದಿದೆ.
ಚಿಕ್ಕಮಗಳೂರು ತಾಲೂಕಿನ ಸಖರಾಯಪಟ್ಟಣ, ಉದ್ದೇಬೋರನಹಳ್ಳಿಯಲ್ಲೂ ಮಳೆ ಅಬ್ಬರಿಸಿದೆ. ನಿನ್ನೆ ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗಿತ್ತು. ಇಂದು ಜಿಲ್ಲೆಯ ಬಯಲುಸೀಮೆ ಭಾಗದಲ್ಲಿ ಧಾರಾಕಾರ ಮಳೆಯಾಗಿದೆ.
ಭಾರೀ ಮಳೆ ಕಂಡು ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಕಳೆದ ಕೆಲವು ದಿನಗಳಿಂದ ಮಲೆನಾಡಿನಲ್ಲಿ ಬಿಸಿಲಿನ ತಾಪದಿಂದ ಸಾರ್ವಜನಿಕರು ಕಂಗಾಲಾಗಿದ್ದರು. ಇಂದು ಮಳೆರಾಯ ತಂಪೆರೆದಿದ್ದಾನೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw