ಕಿಂಡಿ ಅಣೆಕಟ್ಟಿನ ಕಾಮಗಾರಿ ವೇಳೆ ಮಗುಚಿ ಬಿದ್ದ ಟ್ರ್ಯಾಕ್ಟರ್: ಕಾರ್ಮಿಕನ ದಾರುಣ ಸಾವು
ಬೆಳ್ತಂಗಡಿ: ಮಲವಂತಿಗೆ ಗ್ರಾಮದ ಬಂಗಾರ ಪಳಿಕೆ ಎಂಬಲ್ಲಿ ಕಿಂಡಿ ಅಣೆಕಟ್ಟಿನ ಕಾಮಗಾರಿ ನಡೆಯುತ್ತಿದ್ದ ವೇಳೆ ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ಕಾರ್ಮಿಕ ಮೃತ ಪಟ್ಟ ಘಟನೆ ಬುಧವಾರ ಸಂಭವಿಸಿದೆ.
ಮೃತ ವ್ಯಕ್ತಿ ಚಿಕ್ಕಮಗಳೂರು ಮೂಲದ ಕಾರ್ಮಿಕನಾಗಿದ್ದಾನೆ ಎಂದು ತಿಳಿದು ಬಂದಿದೆ . ಇನ್ನೋರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.
ಟ್ರ್ಯಾಕ್ಟರ್ ನಲ್ಲಿ ಕಬ್ಬಿಣದ ರಾಡುಗಳನ್ನು ಸಾಗಾಟ ಮಾಡುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ತೆರಳಿದ್ದು ಪರಿಶೀಲನೆ ನಡೆಸುತ್ತಿದ್ದಾರೆ ಘಟನೆಯ ಬಗ್ಗೆ ಹೆಚ್ವಿನ ಮಾಹಿತಿಗಳು ಇನ್ನಷ್ಟೇ ತಿಳಿದು ಬರಬೇಕಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka