ಮೇ 20, 21 ರಂದು ಸಿಇಟಿ ಪರೀಕ್ಷೆಗೆ ಟ್ರಾಫಿಕ್ ಆತಂಕ!
ಬೆಂಗಳೂರು: ಶನಿವಾರ ಹಾಗೂ ಭಾನುವಾರ ರಾಜ್ಯಾದ್ಯಂತ ಸಿಇಟಿ ಪರೀಕ್ಷೆ ನಡೆಯಲಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆಯನ್ನು ನಡೆಸುತ್ತಿದೆ.
ಈ ಬಾರಿ ಸಿಇಟಿ ಪರೀಕ್ಷೆ ರಾಜ್ಯದ 592 ಕೇಂದ್ರಗಳಲ್ಲಿ ನಡೆಯಲಿದೆ. ಬೆಂಗಳೂರಿನಲ್ಲೇ 121 ಪರೀಕ್ಷಾ ಕೇಂದ್ರಗಳಿದ್ದು, ಉಳಿದ ಜಿಲ್ಲೆಗಳಲ್ಲಿ 471 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.
ರಾಜ್ಯಾದ್ಯಂತ ಪರೀಕ್ಷೆಗೆ 2,61,610 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. 592 ಅಬ್ಸವರ್ಸ್‌ಗಳು, 1,184 ವಿಶೇಷ ಸ್ಕ್ವಾಡ್ ಸಿಬ್ಬಂದಿ, 592 ಕಸ್ಟೋಡಿಯನ್, 10,900 ಇನ್ವಿಜಿಲೇಟರ್‌ಗಳು ಸೇರಿ 23,050 ಅಧಿಕಾರಿಗಳು ಪರೀಕ್ಷಾ ಕೇಂದ್ರಕ್ಕೆ ನಿಯೋಜನೆಗೊಂಡಿದ್ದಾರೆ.
ಮೇ 22ರ ಬೆಳಗ್ಗೆ 11:30ರಿಂದ 12:30ರ ವರೆಗೆ ಹೊರನಾಡು ಹಾಗೂ ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಬೆಂಗಳೂರು, ಬೆಳಗಾವಿ, ವಿಜಯಪುರ, ಬಳ್ಳಾರಿ ಹಾಗೂ ಮಂಗಳೂರು ಪರೀಕ್ಷಾ ಕೇಂದ್ರಗಳಲ್ಲಿ ಕನ್ನಡ ಭಾಷೆ ಪರೀಕ್ಷೆ ನಡೆಯಲಿದೆ. ಇದರಡಿ 2,084 ಅರ್ಹ ಅಭ್ಯರ್ಥಿಗಳು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಆದರೆ ಮೇ 20 ರಂದು ನೂತನ ಮುಖ್ಯಮಂತ್ರಿಹಾಗೂ ಸಂಪುಟದ ಕೆಲ ಸದಸ್ಯರ ಪ್ರಮಾಣ ವಚನ ಕಾರ್ಯಕ್ರಮ ಬೆಂಗಳೂರಿನಲ್ಲಿನಡೆಯಲಿದ್ದು ಕಾರ್ಯಕ್ರಮಕ್ಕೆ ರಾಜ್ಯದ ಹಾಗೂ ಬೆಂಹಳೂತಿನ ಮೂಲೆ ಮೂಲೆಗಳಿಂದ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಬರುವ ಸಾಧ್ಯತೆ ಇರುವುದರಿಂದ ನಗರದಲ್ಲಿ ಟ್ರಾಫಿಕ್ ಆಗುವ ಸಾಧ್ಯತೆಯಿದೆ. ಇದೀಗ ಸಿಇಟಿ ಪರೀಕ್ಷೆ ಬರೆಯಲು ಸಿದ್ಧತೆ ನಡೆಸುತ್ತಿರುವ ಬೆಂಗಳೂರಿನ ಅಭ್ಯರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಟ್ರಾಫಿಕ್ ಜಾಮ್‌ನ ಭೀತಿ ಎದುರಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw