ಉಡುಪಿ: ಮೀನು ಹಿಡಿಯಲು ಹೋಗಿದ್ದ ನಾಲ್ವರು ಯುವಕರ ದುರಂತ ಸಾವು
ಉಡುಪಿ: ನದಿಯಲ್ಲಿ ಮರುವಾಯಿ ಹೆಕ್ಕಲು ಹೋಗಿದ್ದ ವೇಳೆ ಸಂಭವಿಸಿದ ದುರಂತದಲ್ಲಿ ನಾಲ್ವರು ಯುವಕರು ಮೃತಪಟ್ಟ ಘಟನೆ ರವಿವಾರ ಸಂಜೆ ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯ ಕುಕ್ಕುಡೆ ಕುದ್ರು ಸಮೀಪದಿಂದ ವರದಿಯಾಗಿದೆ.
ಮೃತರನ್ನು ಹೂಡೆ ನಿವಾಸಿಗಳಾದ ಫೈಝಾನ್ ಹಾಗೂ ಇಬಾದ್ ಮತ್ತು ಶೃಂಗೇರಿಯ ಸುಫಾನ್ ಮತ್ತು ಫರಾನ್ ಎಂದು ಗುರುತಿಸಲಾಗಿದೆ. ಘಟನೆಯ ವೇಳೆ ದೋಣಿಯಲ್ಲಿದ್ದ ಇತರ ಮೂವರು ಯುವಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಈದ್ ಹಿನ್ನೆಲೆಯಲ್ಲಿ ಶೃಂಗೇರಿಯ ಯುವಕರು ಹೂಡೆಯಲ್ಲಿರುವ ತಮ್ಮ ಸಂಬಂಧಿಕರ ಮನೆಗೆ ಆಗಮಿಸಿದ್ದರು. ಇಂದು ಸಂಜೆ ಒಟ್ಟು ಏಳು ಮಂದಿ ನದಿಯಿಂದ ಮರುವಾಯಿ ಸಂಗ್ರಹಿಸುವ ಉದ್ದೇಶದಿಂದ ಹೂಡೆಯ ಗುಡ್ಡೇರಿ ಕಂಬಳದಿಂದ ಕುಕ್ಕುಡೆ ಕುದ್ರುವಿಗೆ ದೋಣಿಯಲ್ಲಿ ತೆರಳಿದ್ದರು.
ಈ ಸಂದರ್ಭ ನಾಲ್ವರು ನೀರಿನಲ್ಲಿ ಮುಳುಗಿನ ನಾಪತ್ತೆಯಾದರು. ಈ ಪೈಕಿ ಮೂವರು ಈಜಿ ಕುದ್ರು ಸೇರಿಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಸ್ಥಳೀಯರು ಹಾಗೂ ಪೊಲೀಸರು ಸ್ಥಳಕ್ಕೆ ಆಗಮಿಸಿ ಹುಡುಕಾಟ ನಡೆದಾಗ ನಾಲ್ವರ ಮೃತದೇಹಗಳು ಪತ್ತೆಯಾಗಿವೆ. ಸ್ಥಳಕ್ಕೆ ಬ್ರಹ್ಮಾವರ ಪೊಲೀಸರು ಹಾಗೂ ಅಧಿಕಾರಿಗಳು ಆಗಮಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw