ಮತದಾನದ ಬಗ್ಗೆ ಜಾಗೃತಿ ಮತ್ತು ಅರಿವು ಮೂಡಿಸಲು ಅಧಿಕಾರಿಗಳಿಗೆ ತರಬೇತಿ

ಮೂಡಿಗೆರೆ: ಮತದಾನದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮತ್ತು ಅರಿವು ಮೂಡಿಸುವ ಸಲುವಾಗಿ ಅಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮವನ್ನು ಮೂಡಿಗೆರೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಚಿಕ್ಕಮಗಳೂರು ಉಪ ವಿಭಾಗದ ಉಪ ವಿಭಾಗಾಧಿಕಾರಿಗಳು ಮತ್ತು ಚುನಾವಣೆ ಅಧಿಕಾರಿ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡಿದ ಉಪ ವಿಭಾಗ ವಿಭಾಗಾಧಿಕಾರಿ, ರಾಜೇಶ್ ಎಚ್.ಡಿ, ಅಧಿಕಾರಿಗಳಿಗೆ ಇವಿಎಂ ಹೇಗೆ ಕಾರ್ಯನಿರ್ವಹಿಸುತ್ತದೆ ಹಾಗೂ ಮತದಾನದ ಸಂದರ್ಭದಲ್ಲಿ ಎದುರಾಗುವ ತೊಡಕುಗಳನ್ನು ಹೇಗೆ ಬಗೆಹರಿಸಬೇಕು ಎಂಬುದನ್ನು ಸವಿವರವಾಗಿ ವಿವರಿಸಿದರು.
ನಂತರ ಮಾಸ್ಟರ್ ಟ್ರೈನರ್ ಗಳಾದ ಶ್ರೀನಿವಾಸ್ ಹಾಗೂ ತಿಮ್ಮಪ್ಪನವರು ಇವಿಎಂನ ಪ್ರಾತ್ಯಕ್ಷಿಕೆಯನ್ನು ಅಧಿಕಾರಿಗಳಿಗೆ ನೀಡಲಾಯಿತು. ಇದೇ ವೇಳೆ ಜನರಲ್ಲಿ ಇವಿಎಂ ಮೂಲಕ ಹೇಗೆ ಮತದಾನದ ಮಹತ್ವವನ್ನು ನೀಡಬೇಕೆಂಬುದನ್ನು ಇವಿಎಂಗಳನ್ನು ಬಳಸಿಕೊಂಡು ತರಬೇತಿ ನೀಡಲಾಯಿತು.
ಈ ಸಭೆಯಲ್ಲಿ ತಹಸೀಲ್ದಾರ್ ಮತ್ತು ಸಹಾಯಕ ಚುನಾವಣೆ ಅಧಿಕಾರಿ ಮೂಡಿಗೆರೆ, ಕಾರ್ಯ ನಿರ್ವಹಣಾಧಿಕಾರಿಗಳು ಮತ್ತು ಸ್ವೀಪ್ ಸಮಿತಿ ಅಧ್ಯಕ್ಷರು ತಾಲೂಕ್ ಪಂಚಾಯಿತಿ , ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ, ಗ್ರಾಮ ಪಂಚಾಯತಿ ಅಧಿಕಾರಿಗಳು ಮತ್ತು ಸೆಕ್ಟರ್ ಅಧಿಕಾರಿಗಳು ತರಬೇತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಈವಿಎಂ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw