ಟ್ರಾವೆಲ್ ಹಿಸ್ಟರಿಯೇ ಇಲ್ಲದ ವಿದ್ಯಾರ್ಥಿನಿಗೆ ಒಮಿಕ್ರಾನ್: ರಾಜ್ಯದಲ್ಲಿ ದಾಖಲಾಗಿರುವ ಒಟ್ಟು ಒಮಿಕ್ರಾನ್ ಕೇಸ್ ಎಷ್ಟು?
ಶಿವಮೊಗ್ಗ: ಭದ್ರಾವತಿಯಲ್ಲಿ ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲದ 20 ವರ್ಷದ ನರ್ಸಿಂಗ್ ವಿದ್ಯಾರ್ಥಿನಿಗೆ ಒಮಿಕ್ರಾನ್ ಬಂದಿದ್ದು, ಉಡುಪಿಯಲ್ಲಿ ಒಂದೇ ಕುಟುಂಬದ ಇಬ್ಬರಿಗೆ ಒಮಿಕ್ರಾನ್ ಸೋಂಕು ತಗುಲಿದೆ.
ದಿನ ಬಿಟ್ಟು ದಿನ ರಾಜ್ಯದಲ್ಲಿ ಒಮಿಕ್ರಾನ್ ಸೋಂಕು ಪ್ರಕರಣಗಳು ಸ್ಫೋಟಗೊಳ್ಳುತ್ತಿವೆ. ಮತ್ತೆ ಹೊಸದಾಗಿ ಐದು ಒಮಿಕ್ರಾನ್ ಕೇಸ್ ಪತ್ತೆಯಾಗಿದೆ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.
ಧಾರವಾಡದಲ್ಲಿ 1 ಒಮಿಕ್ರಾನ್ ಕೇಸ್, ಧಾರವಾಡದ 54 ವರ್ಷದ ಪುರುಷನಲ್ಲಿ ಒಮಿಕ್ರಾನ್ ಪತ್ತೆಯಾಗಿದೆ. ಉಡುಪಿಯ 82 ವರ್ಷ ಮತ್ತು 73 ವರ್ಷದ ವೃದ್ಧ ದಂಪತಿಗಳಿಗೆ ಸೋಂಕು ತಗುಲಿದೆ. ಮಂಗಳೂರಿನ 19 ವರ್ಷದ ಯುವತಿಯಲ್ಲಿಯೂ ಒಮಿಕ್ರಾನ್ ಸೋಂಕು ಕಾಣಿಸಿಕೊಂಡಿದೆ. ಸದ್ಯ ರಾಜ್ಯದಲ್ಲಿ ಓಮಿಕ್ರಾನ್ ಸೋಂಕು ಪ್ರಕರಣಗಳು 19ಕ್ಕೆ ಏರಿಕೆಯಾಗಿವೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಪ್ರೇಮ ವೈಫಲ್ಯ: ಬೀದರ್ ಮೂಲದ ವಿದ್ಯಾರ್ಥಿನಿ ಮಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣು
ನೇಣು ಬಿಗಿದ ಸ್ಥಿತಿಯಲ್ಲಿ ಸ್ವಾಮೀಜಿಯ ಮೃತದೇಹ ಪತ್ತೆ!
ಭಾರತ 400 ಬಿಲಿಯನ್ ಡಾಲರ್ ರಫ್ತು ಗುರಿಯನ್ನು ಸಾಧಿಸಲಿದೆ: ಕೇಂದ್ರ ಸಚಿವ ಪಿಯೂಷ್ ಗೋಯಲ್
ಗುರುದ್ವಾರದಲ್ಲಿ ಧಾರ್ಮಿಕ ಧ್ವಜ ತೆಗೆಯಲು ಯತ್ನಿಸಿದ ಆರೋಪ: ವ್ಯಕ್ತಿಗೆ ಥಳಿತ