ಸ್ಕೂಟಿಯಲ್ಲಿ 7 ಮಕ್ಕಳೊಂದಿಗೆ ಪ್ರಯಾಣಿಸಿದ ವ್ಯಕ್ತಿಗೆ ಸಂಕಷ್ಟ! - Mahanayaka
10:15 PM Thursday 12 - December 2024

ಸ್ಕೂಟಿಯಲ್ಲಿ 7 ಮಕ್ಕಳೊಂದಿಗೆ ಪ್ರಯಾಣಿಸಿದ ವ್ಯಕ್ತಿಗೆ ಸಂಕಷ್ಟ!

bike raide
26/06/2023

ಮುಂಬೈ: ವ್ಯಕ್ತಿಯೋರ್ವ 7 ಮಕ್ಕಳನ್ನು ಸ್ಕೂಟಿಯಲ್ಲಿ ಕೊಂಡೊಯ್ಯುವ ಮೂಲಕ ಮಕ್ಕಳ ಪ್ರಾಣವನ್ನೇ ಪಣಕ್ಕಿಟ್ಟು, ಹುಚ್ಚಾಟ ಮೆರೆದಿದ್ದು, ಇದೀಗ ಈತನ ವಿರುದ್ಧ ಪೊಲೀಸರು ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.

ಮಹಾರಾಷ್ಟ್ರದ ಮುಂಬೈನಲ್ಲಿ ಈ ಘಟನೆ ನಡೆದಿದೆ. ವ್ಯಕ್ತಿಯು 7 ಮಕ್ಕಳನ್ನು ಸ್ಕೂಟಿನಲ್ಲಿ ಕೂರಿಸಿ ಹಾಗೂ ನಿಲ್ಲಿಸಿ, ಚಲಾಯಿಸಿದ್ದಾನೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಮುಂಬೈ ಟ್ರಾಫಿಕ್ ಪೊಲೀಸರು ಎಚ್ಚೆತ್ತುಕೊಂಡು ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಈ ಬೇಜವಾಬ್ದಾರಿಯ ಹುಚ್ಚ ಸ್ಕೂಟರ್ ನಲ್ಲಿ 7 ಮಕ್ಕಳೊಂದಿಗೆ ಸವಾರಿ ಮಾಡುತ್ತಿದ್ದಾನೆ. ಮಕ್ಕಳ ಪ್ರಾಣಕ್ಕೆ ಅಪಾಯ ತಂದಿರುವ ಆತನನ್ನು ತಕ್ಷಣ ಬಂಧಿಸಬೇಕು ಮತ್ತು ಮಕ್ಕಳ ಪೋಷಕರ ಮೇಲೆಯೂ ಕ್ರಮಕೈಗೊಳ್ಳಬೇಕು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕರು ಒತ್ತಾಯಿಸಿದ್ದಾರೆ.

https://twitter.com/sohfacts/status/1671103340263116802?s=20

 

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ