ಎನ್ ಐಎ ಮೇಲೆ ಜನರ ದಾಳಿ ಪ್ರಕರಣ: ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ
2022 ರ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ತಂಡದ ಮೇಲೆ ಮಿಡ್ನಾಪುರ ಜಿಲ್ಲೆಯ ಭೂಪತಿನಗರದಲ್ಲಿ ಶನಿವಾರ ದಾಳಿ ನಡೆಸಿದ ನಂತರ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಈ ಘಟನೆಯ ಬಗ್ಗೆ ವಾಗ್ದಾಳಿ ನಡೆಸಿದ್ರೆ ಎರಡೂ ಕಡೆಯ ನಾಯಕರು ಸಹ ರ್ಯಾಲಿ ನಡೆಸಿದ್ದಾರೆ.
ತೃಣಮೂಲ ಕಾಂಗ್ರೆಸ್ ಸಂವಿಧಾನವನ್ನು ನಾಶಪಡಿಸುತ್ತಿದೆ ಮತ್ತು ಭ್ರಷ್ಟ ನಾಯಕರನ್ನು ಉಳಿಸಲು ಪ್ರಯತ್ನಿಸುತ್ತಿದೆ ಎಂದು ಪ್ರಧಾನಿ ಮೋದಿ ಆರೋಪಿಸಿದ್ದಾರೆ. ಮತ್ತೊಂದೆಡೆ, ಕೇಂದ್ರ ಏಜೆನ್ಸಿಗಳು ತೃಣಮೂಲ ನಾಯಕರನ್ನು ಬಿಜೆಪಿಗೆ ಸೇರುವಂತೆ ಬೆದರಿಕೆ ಹಾಕುತ್ತಿವೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.
ಟಿಎಂಸಿ ತಮ್ಮ ಭ್ರಷ್ಟ ನಾಯಕರಿಗೆ ಬಹಿರಂಗವಾಗಿ ಮುಂದುವರಿಯಲು ಪರವಾನಗಿ ಪಡೆಯಲು ಬಯಸಿದೆ. ಅದಕ್ಕಾಗಿಯೇ ಕೇಂದ್ರ ಏಜೆನ್ಸಿಗಳು ಪಶ್ಚಿಮ ಬಂಗಾಳಕ್ಕೆ ಬಂದಾಗ, ಟಿಎಂಸಿ ಅವರ ಮೇಲೆ ದಾಳಿ ಮಾಡುತ್ತದೆ. ಟಿಎಂಸಿ ನಮ್ಮ ಕಾನೂನು ವ್ಯವಸ್ಥೆ ಮತ್ತು ಸಂವಿಧಾನವನ್ನು ನಾಶಪಡಿಸಲು ಬಯಸುವ ಪಕ್ಷವಾಗಿದೆ” ಎಂದು ಪಶ್ಚಿಮ ಬಂಗಾಳದ ಜಲ್ಪೈಗುರಿಯಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಪ್ರಧಾನಿ ಆರೋಪಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth