ತ್ರಿಪುರ ಸಿಎಂ ವಿಪ್ಲವ್ ಕುಮಾರ್ ದೇವ್ ಮೇಲೆ ಕಾರು ಹರಿಸಿ ಹತ್ಯೆಗೆ ಯತ್ನ: ಮೂವರ ಬಂಧನ
ಅಗರ್ತಲಾ: ತ್ರಿಪುರ ಸಿಎಂ ವಿಪ್ಲವ್ ಕುಮಾರ್ ದೇವ್ ಅವರ ಹತ್ಯೆಗೆ ಯತ್ನಿಸಿದ ಆರೋಪದಲ್ಲಿ ಮೂವರನ್ನು ಬಂಧಿಸಲಾಗಿದ್ದು, ಶ್ಯಾಮ್‌ಪ್ರಸಾದ್ ಮುಖರ್ಜಿ ಲೇನ್ ಲ್ಲಿರುವ ತಮ್ಮ ಅಧಿಕೃತ ನಿವಾಸದ ಸಮೀಪ ಗುರುವಾರ ಸಂಜೆ ವಾಯುವಿಹಾರ ಮಾಡುತ್ತಿದ್ದ ವೇಳೆ ಮೂವರು ದುಷ್ಕರ್ಮಿಗಳು ಮುಖ್ಯಮಂತ್ರಿಯ ಹತ್ಯೆಗೆ ಯತ್ನಿಸಿದ್ದರು ಎಂದು ಆರೋಪಿಸಲಾಗಿದೆ.
ಆರೋಪಿಗಳು ಭದ್ರತೆಯನ್ನು ಭೇದಿಸಿ, ಮುಖ್ಯಮಂತ್ರಿ ಅವರ ಮೇಲೆ ಕಾರು ಹತ್ತಿಸಲು ಪ್ರಯತ್ನಿಸಿದರು. ಈ ವೇಳೆ ಮುಖ್ಯಮಂತ್ರಿಯವರು ಮಿಂಚಿನ ವೇಗದಲ್ಲಿ ಪಕ್ಕಕ್ಕೆ ಜಿಗಿದರು. ಈ ಘಟನೆಯಲ್ಲಿ ಭದ್ರತಾ ಸಿಬ್ಬಂದಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದರು. ಮುಖ್ಯಮಂತ್ರಿ ಭದ್ರತೆಗಾಗಿ ನಿಯೋಜಿಸಿದ್ದ ಸಿಬ್ಬಂದಿಯು ಈ ಕಾರನ್ನು ಅಡ್ಡಗಟ್ಟಲು ಪ್ರಯತ್ನಿಸಿದರೂ, ಪ್ರಯೋಜನವಾಗಲಿಲ್ಲ ಎಂದು ವರದಿಯಾಗಿದೆ.
ಮೂವರು ಆರೋಪಿಗಳನ್ನೂ ಗುರುವಾರ ತಡರಾತ್ರಿ ಕೆರ್ಚೌಮಹಾನಿಯಲ್ಲಿ ಪೊಲೀಸರು ಬಂಧಿಸಿ, ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಶುಕ್ರವಾರ ಅವರನ್ನು ಸಿಜೆಎಂ ನ್ಯಾಯಾಧೀಶ ಪಿ.ಪಿ.ಪೌಲ್ ಎದುರು ಹಾಜರುಪಡಿಸಲಾಯಿತು. ನ್ಯಾಯಾಧೀಶರು ಮೂವರನ್ನೂ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ.
ಇನ್ನಷ್ಟು ಸುದ್ದಿಗಳು…
ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯ ಹೆಸರು ಬದಲಿಸಿದ ಪ್ರಧಾನಿ ಮೋದಿ
ಡಯಾಲಿಸಿಸ್ ಗಾಗಿ ಆಸ್ಪತ್ರೆಗೆ ಬಂದಿದ್ದ ಮಹಿಳೆಯ ಮೇಲೆ ವಾರ್ಡ್ ಬಾಯ್ ನಿಂದ ಅತ್ಯಾಚಾರ!
ಅಪ್ರಾಪ್ತೆಯರನ್ನು ಗರ್ಭಿಣಿಯಾಗಿಸಿ ಪರಾರಿಯಾಗುತ್ತಿದ್ದಾತನನ್ನು ಉಪಾಯವಾಗಿ ಬಂಧಿಸಿದ ಮಹಿಳಾ ಎಸ್ ಐ!
ಕಂಠಪೂರ್ತಿ ಕುಡಿದು ರಸ್ತೆಯ ಮಧ್ಯೆ ಯುವತಿ ಮಾಡಿದ ಕೆಲಸ ಏನು ಗೊತ್ತಾ? | ವಿಡಿಯೋ ವೈರಲ್
ಶಾಕಿಂಗ್ ನ್ಯೂಸ್: ಬ್ಲೂಟೂತ್ ಹೆಡ್ ಫೋನ್ ಸ್ಫೋಟ ಯುವಕ ದಾರುಣ ಸಾವು
403 ಕ್ಷೇತ್ರಗಳಲ್ಲಿಯೂ ASP ಸ್ಪರ್ಧೆ | ಮಾಯಾವತಿಗೆ ಅಸುರಕ್ಷಿತ ಭಾವನೆ ಇದೆ- ಚಂದ್ರಶೇಖರ್ ಆಜಾದ್