ಬಿ.ಎಸ್.ಯಡಿಯೂರಪ್ಪ, ಶ್ರೀರಾಮುಲುಗೆ ಸಂಕಷ್ಟ: ಕೋವಿಡ್ ಕಾಲದ ಹಗರಣ ತನಿಖೆಗೆ ಆಯೋಗ ಶಿಫಾರಸು
ಬೆಂಗಳೂರು: ಬಿಜೆಪಿ ಅವಧಿಯಲ್ಲಿ ಕೋವಿಡ್ 19 ಚಿಕಿತ್ಸೆ ಹಾಗೂ ನಿರ್ವಹಣೆ ಹೆಸರಿನಲ್ಲಿ ನಡೆದ ಹಗರಣಕ್ಕೆ ಸಂಬಂಧಿಸಿದಂತೆ ಆಗಿನ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಬಿ. ಶ್ರೀರಾಮುಲು ವಿರುದ್ಧ ತನಿಖೆ ನಡೆಸಲು ಶಿಫಾರಸ್ಸು ಮಾಡಲಾಗಿದೆ.
ಕೋವಿಡ್ 19 ಚಿಕಿತ್ಸೆ ಹಾಗೂ ನಿರ್ವಹಣೆ ಹೆಸರಿನಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಡಿ ಕುನ್ಹಾ ಅವರ ನೇತೃತ್ವದಲ್ಲಿ ರಚಿಸಿದ್ದ ಆಯೋಗವು ಅಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರನ್ನು ತನಿಖೆ ನಡೆಸಲು ಶಿಫಾರಸ್ಸು ಮಾಡಿದೆ.
ಏಪ್ರಿಲ್ 2020ರಲ್ಲಿ ಚೀನಾದ ಎರಡು ಕಂಪನಿಗಳಿಂದ 3 ಲಕ್ಷ ಪಿಪಿಇ ಕಿಟ್ ಗಳನ್ನು ಅತ್ಯಂತ ದುಬಾರಿ ದರಗಳಲ್ಲಿ ಖರೀದಿಸಿದ್ದಕ್ಕೆ ಯಾವುದೇ ನಿಖರವಾದ ಕಾರಣವಿಲ್ಲ ಎಂಬುದು ‘ದಿ ಹಿಂದೂ’ಗೆ ಲಭ್ಯವಿರುವ ಡಿ ಕುನ್ಹಾ ಅವರ ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಪಿಪಿಇ ಕಿಟ್ ಖರೀದಿ ಪ್ರಕ್ರಿಯೆ ಸಂದರ್ಭ ಬಿ. ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದರು ಮತ್ತು ಬಿ. ಶ್ರೀರಾಮುಲು ಆರೋಗ್ಯ ಸಚಿವರಾಗಿದ್ದರು. 1988ರ ಭ್ರಷ್ಟಾಚಾರ ತಡೆ ಕಾಯ್ದೆ ಮತ್ತು ವಿಶ್ವಾಸಾರ್ಹತೆ ಉಲ್ಲಂಘನೆ ಅಪರಾಧದ ಅನ್ವಯ ಸೆಕ್ಷನ್ 7 ಮತ್ತು 11ರ ಅಡಿ ತನಿಖೆ ನಡೆಸುವಂತೆ ಆಯೋಗವು ಶಿಫಾರಸು ಮಾಡಿದೆ.
ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಹೇಳಿದೆ. ಆಗಸ್ಟ್ 31ರಂದು ಡಿ ಕುನ್ಹಾ ಆಯೋಗವು ತನ್ನ ಮಧ್ಯಂತರ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿತ್ತು. ಪ್ರಸ್ತುತ ಸಂಪುಟದ ಉಪ ಸಮಿತಿಯು ವರದಿಯನ್ನು ಪರಿಶೀಲಿಸುತ್ತಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97