ಸಿದ್ದರಾಮಯ್ಯ ಬಳಿಕ ಹೆಚ್.ಡಿ.ಕುಮಾರಸ್ವಾಮಿಗೆ ಸಂಕಷ್ಟ: ರಾಜ್ಯಪಾಲರಿಗೆ ಪತ್ರ ಬರೆದ ಎಸ್ ಐಟಿ - Mahanayaka
5:59 PM Thursday 26 - December 2024

ಸಿದ್ದರಾಮಯ್ಯ ಬಳಿಕ ಹೆಚ್.ಡಿ.ಕುಮಾರಸ್ವಾಮಿಗೆ ಸಂಕಷ್ಟ: ರಾಜ್ಯಪಾಲರಿಗೆ ಪತ್ರ ಬರೆದ ಎಸ್ ಐಟಿ

hd kumarasawamy
20/08/2024

ಬೆಂಗಳೂರು: ನಿಯಮ ಉಲ್ಲಂಘಿಸಿ ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಕಂಪನಿಗೆ ಗಣಿ ಗುತ್ತಿಗೆ ಮಂಜೂರು ಮಾಡಿರುವ ಆರೋಪದಡಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲು ಅನುಮತಿ ಕೋರಿ ಎಸ್ ಐಟಿ ರಾಜ್ಯಪಾಲರಿಗೆ ಪತ್ರ ಬರೆದಿದೆ.

ಹೆಚ್.ಡಿ.ಕುಮಾರಸ್ವಾಮಿ ಅವರು 2007ರಲ್ಲಿ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಗಣಿ ಮತ್ತು ಖನಿಜ ನಿಯಮಗಳನ್ನು ಉಲ್ಲಂಘಿಸಿ ಎಸ್ ಎಸ್ ವಿಎಂ ಕಂಪನಿಗೆ 550 ಎಕರೆ ವಿಸ್ತೀರ್ಣದ ಗಣಿ ಗುತ್ತಿಗೆ ಮಂಜೂರು ಮಾಡಿದ ಆರೋಪವಿದೆ. 2011ರಲ್ಲಿ ಲೋಕಾಯುಕ್ತರಾಗಿದ್ದ ಎನ್. ಸಂತೋಷ್ ಹೆಗ್ಡೆ ಅವರು ಅಕ್ರಮ ಗಣಿಗಾರಿಕೆ ಕುರಿತು ಸಲ್ಲಿಸಿದ್ದ ವರದಿ ಉಲ್ಲೇಖ ಆಧರಿಸಿ ಎಸ್ ಐಟಿ ತನಿಖೆ ನಡೆಸುತ್ತಿದೆ.

ಕುಮಾರಸ್ವಾಮಿ ಅವರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ, ಭಾರತೀಯ ಕಾಯ್ದೆ, ಭಾರತೀಯ ದಂಡ ಸಂಹಿತೆ ಹಾಗೂ ಗಣಿ ಮತ್ತು ಖನಿಜ ಕಾಯ್ದೆಯ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಲು ಅನುಮತಿ ನೀಡುವಂತೆ ಎಸ್ ಐಟಿ 2023 ನಂಬರ್ 21ರಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪ್ರಸ್ತಾವನೆ ಸಲ್ಲಿಸಿತ್ತು.

ಹೆಚ್ಡಿ ಕುಮಾರಸ್ವಾಮಿ ಅವರ ವಿರುದ್ಧ ಆರೋಪಗಳಿಗೆ ಸಂಬಂಧಿಸಿದಂತೆ ಕೆಲವು ಸ್ಪಷ್ಟನೆಗಳನ್ನು ನೀಡುವಂತೆ ರಾಜ್ಯಪಾಲರು ಜುಲೈ 29 ರಂದು ಎಸ್ ಐಟಿಗೆ ಪತ್ರ ಬರೆದರು. ಅದರಂತೆ ಎಸ್ ಐಟಿ ಸೋಮವಾರ ಸಂಜೆ ರಾಜ್ಯಪಾಲರಿಗೆ ಪತ್ರ ಬರೆಯಿತು. ಹಾಗೇ ಹೆಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಆರೋಪಪಟ್ಟಿ ಸಲ್ಲಿಸಲು ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಮತ್ತೆ ಮನವಿ ಮಾಡಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ