ಟ್ರಕ್–ಆಟೋ ಮುಖಾಮುಖಿ ಡಿಕ್ಕಿ: 7 ಕೂಲಿ ಕಾರ್ಮಿಕ ಬಡ ಜೀವಗಳು ಬಲಿ
ಬೀದರ್: ಟ್ರಕ್ ಮತ್ತು ಆಟೋ ಮುಖಾಮುಖಿ ಡಿಕ್ಕಿಯಾಗಿ 7 ಮಂದಿ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಬೆಮ್ಮಳಖೇಡ ಬಳಿ ನಿನ್ನೆ ರಾತ್ರಿ ನಡೆದಿದೆ.
ಘಟನೆಯಲ್ಲಿ ನಿನ್ನೆ ಪ್ರಭಾವತಿ(36), ಯಾದಮ್ಮ(40), ಗುಂಡಮ್ಮ(52), ಜಕ್ಕಮ್ಮ(32) ಹಾಗೂ ರುಕ್ಮಿಣಿ(60) ಎಂಬವರು ಮೃತಪಟ್ಟಿದ್ದರು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಬೀದರ್, ಮನ್ನಾಖೇಳಿ ಆಸ್ಪತ್ರೆಗಳಲ್ಲಿ ದಾಖಲಿಸಿ ಚಿಕಿತ್ಸೆ ಪಡೆಯುತ್ತಿದ್ದವರ ಪೈಕಿ ಇಬ್ಬರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಹೀಗಾಗಿ ಮೃತರ ಸಂಖ್ಯೆ 7ಕ್ಕೆ ಏರಿದೆ.
ಮೃತರು ಮತ್ತು ಗಾಯಾಳುಗಳು ಉಡಮನಳ್ಳಿ ಗ್ರಾಮಸ್ಥರಾಗಿದ್ದು, ಕೂಲಿ ಕೆಲಸ ಮುಗಿಸಿಕೊಂಡು ಸ್ವಗ್ರಾಮಕ್ಕೆ ಆಟೋದಲ್ಲಿ ವಾಪಸಾಗುತ್ತಿದ್ದಾಗ ಬೆಮಳಖೇಡಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದ್ದು, ಬಡ ಜೀವಗಳು ಬಲಿಯಾಗಿವೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka