ಬಸ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಟ್ರಕ್: 7 ಮಂದಿಯ ದಾರುಣ ಸಾವು
ಅಂಬಾಲಾ: ಬಸ್ ಗೆ ಟ್ರೇಲರ್ ಟ್ರಕ್ ಹಿಂಬದಿಯಿಂದ ಡಿಕ್ಕಿಯಾದ ಪರಿಣಾಮ 7 ಮಂದಿ ಸಾವನ್ನಪ್ಪಿ, ನಾಲ್ವರು ಗಾಯಗೊಂಡ ಘಟನೆ ಹರಿಯಾಣದ ಅಂಬಾಲಾದ ಯಮುನಾ ನಗರ–ಪಂಚಕುಲ ಹೆದ್ದಾರಿಯಲ್ಲಿ ನಡೆದಿದೆ.
ಶಹಜಾದ್ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ಈ ದುರ್ಘಟನೆ ನಡೆದಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಟ್ರಕ್ ಚಾಲಕ ನಿದ್ರೆಗೆ ಜಾರಿದ್ದರಿಂದಾಗಿ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ಬಸ್ ಗೆ ರಾಂಗ್ ಸೈಡ್ ನಲ್ಲಿ ಹಿಂದಿನಿಂದ ಬಂದು ಡಿಕ್ಕಿ ಹೊಡೆದ ಟ್ರಕ್ ಪಲ್ಟಿಯಾಗಿದೆ.
ಎರಡೂ ವಾಹನಗಳ ಚಾಲಕರಿಗೆ ಯಾವುದೇ ಅಪಾಯ ಸಂಭವಿಸಿಲ್ಲ, ಅಪಘಾತದ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿರುವುದಾಗಿ ಬಿರ್ ಬಹಾನ್, ಶಹಜಾದ್‌ಪುರ ಪೊಲೀಸ್ ಠಾಣೆ ಅಧಿಕಾರಿಗಳು ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw