ಬಸ್ಸಿಗಾಗಿ ಕಾಯುತ್ತಿದ್ದವರ ಮೇಲೆ ಹರಿದ ಟ್ರಕ್: 6 ಜನ ಸಾವು, 8 ಜನರ ಸ್ಥಿತಿ ಚಿಂತಾಜನಕ
ಮಧ್ಯಪ್ರದೇಶ: ಬಸ್ಸಿಗಾಗಿ ಕಾಯುತ್ತಿದ್ದವರ ಮೇಲೆ ಟ್ರಕ್ ಹರಿದ ಪರಿಣಾಮ ಇಬ್ಬರು ಮಹಿಳೆಯರು ಸೇರಿದಂತೆ ಕನಿಷ್ಠ ಆರು ಮಂದಿ ಮೃತಪಟ್ಟ ಘಟನೆ ಮಧ್ಯಪ್ರದೇಶದ ರತ್ಲಾಂ ಜಿಲ್ಲೆಯಲ್ಲಿ ನಡೆದಿದೆ.
ಭಾನುವಾರ ಸಂಜೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 10 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಎಂಟು ಮಂದಿಯ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟ್ರಕ್ ನ ಚಕ್ರ ಸ್ಫೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ಕಳೆದುಕೊಂಡ ಟ್ರಕ್ ಬಸ್ ನಿಲ್ದಾಣದಲ್ಲಿ ನಿಂತಿದ್ದವರ ಮೇಲೆ ಹರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರತ್ಲಾಂ ಜಿಲ್ಲಾ ಕೇಂದ್ರದಿಂದ ಸುಮಾರು 30 ಕಿ.ಮೀ. ದೂರದಲ್ಲಿ ಸಾತ್ರುಂಡಾ ಗ್ರಾಮದ ರತ್ಲಾಂ-ಲೆಬಾದ್ ರಸ್ತೆಯಲ್ಲಿ ಅವಘಡ ಸಂಭವಿಸಿದೆ. ಟ್ರಕ್ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ತಿವಾರಿ ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka