ವೇಗವಾಗಿ ಬಂದು ಮನೆಯೊಳಗೆ ನುಗ್ಗಿದ ಟ್ರಕ್: ಸಬ್ ಇನ್ಸ್ ಪೆಕ್ಟರ್ ಸಹಿತ ನಾಲ್ವರು ಸಾವು

ಉತ್ತರಪ್ರದೇಶ: ಅತೀ ವೇಗದಿಂದ ಬಂದ ಟ್ರಕ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಮನೆಯೊಂದರೊಳಗೆ ನುಗ್ಗಿದ್ದು, ಪರಿಣಾಮವಾಗಿ ಓರ್ವ ಸಬ್ ಇನ್ಸ್ ಪೆಕ್ಟರ್ ಸೇರಿದಂತೆ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ ಐವರಿಗೆ ಗಾಯಗಳಾಗಿವೆ. ಓರ್ವ ಅವಶೇಷಗಳಡಿಯಲ್ಲಿ ಸಿಲುಕಿದ್ದು, ಈತನ ರಕ್ಷಣೆಗಾಗಿ ಕಾರ್ಯಾಚರಣೆ ನಡೆಯುತ್ತಿದೆ.
ಕುರಾವಲಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಜಿಟಿ ರೋಡ್ ಸಮೀಪ ಖಿರಿಯ ಪೀಪಲ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಅತಿ ವೇಗದಿಂದ ಬಂದ ಟ್ರಕ್ ಮನೆಯೊಳಗೆ ನುಗ್ಗಿದ್ದು ಪರಿಣಾಮವಾಗಿ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ.
ಘಟನೆಯಲ್ಲಿ ಐದು ಮಂದಿಗೆ ಗಾಯಗಳಾಗಿವೆ. ಘಟನಾ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರು ಸೇರಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka