ಟ್ಯೂಷನ್ ವೇಳೆ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಶಿಕ್ಷಕ ಅರೆಸ್ಟ್ - Mahanayaka
7:50 AM Thursday 12 - December 2024

ಟ್ಯೂಷನ್ ವೇಳೆ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಶಿಕ್ಷಕ ಅರೆಸ್ಟ್

tuition
10/10/2021

ಕೋಲ್ಕತ್ತಾ:  ವಿದ್ಯಾರ್ಥಿನಿಗೆ ಟ್ಯೂಷನ್ ನೀಡಲು ಬಂದಿದ್ದ ಶಿಕ್ಷಕನೋರ್ವ, ಆಕೆಗೆ ಕಿರುಕುಳ ನೀಡಿದ ಘಟನೆ ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದ ಎಕ್ಪಾಲ್‌ ಬೋರ್ ಪ್ರದೇಶದಲ್ಲಿರುವ ಶಿಕ್ಷಕನ ಮನೆಯಲ್ಲಿಯೇ ನಡೆದಿದೆ.

40 ವರ್ಷ ವಯಸ್ಸಿನ ಜೀವಶಾಸ್ತ್ರ ಶಿಕ್ಷಕನ ಮೇಲೆ ಈ ಆರೋಪ ಕೇಳಿ ಬಂದಿದ್ದು, 16 ವರ್ಷ ವಯಸ್ಸಿನ ಬಾಲಕಿ ತನ್ನ ಪರೀಕ್ಷೆಗೆ ಮುಂಚಿತವಾಗಿ ಟ್ಯೂಷನ್ ತೆಗೆದುಕೊಳ್ಳಲು ಆರೋಪಿಯ ಮನೆಗೆ ಹೋಗಿದ್ದಳು. ಈ ವೇಳೆ ಬಾಲಕಿ ಒಬ್ಬಂಟಿಯಾಗಿರುವ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಶಿಕ್ಷಕ ಆಕೆಗೆ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ.

ಘಟನೆಯ ಸಂಬಂಧ ಸಂತ್ರಸ್ತ ಬಾಲಕಿಯ ತಂದೆ ನೀಡಿರುವ ದೂರಿನ ಆಧಾರದಲ್ಲಿ ಆರೋಪಿ ಶಿಕ್ಷಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಶಿಕ್ಷಕನ ವಿರುದ್ಧ ಪೊಲೀಸರು  ಶಿಕ್ಷಕನ ವಿರುದ್ಧ ಭಾರತೀಯ ದಂಡ ಸಂಹಿತೆ(ಐಪಿಸಿ), POCSO  ಮತ್ತು ಕಿರುಕುಳದ ಸೆಕ್ಷನ್ ಅಡಿಯಲ್ಲಿ  ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆರೋಪಿ ಶಿಕ್ಷಕ ಬಾಲಕಿಯನ್ನು ಅನುಚಿತವಾಗಿ ಸ್ಪರ್ಶಿಸಿ ಬಲವಂತವಾಗಿ ಮುತ್ತು ಕೊಡಲು ಯತ್ನಿಸಿದ್ದಾನೆ ಎಂದು ದೂರಿನಲ್ಲಿ ಬಾಲಕಿಯ ತಂದೆ ಆರೋಪಿಸಿದ್ದಾರೆ  ವಿದ್ಯಾರ್ಥಿನಿಯನ್ನು ಪ್ರತ್ಯೇಕ ಕೋಣೆಯಲ್ಲಿ ಕೂರಿಸಿ ಶಿಕ್ಷಕ ಈ ದುಷ್ಕೃತ್ಯ ನಡೆಸಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಇನ್ನಷ್ಟು ಸುದ್ದಿಗಳು…

ಮನೆಯ ಒಳಗೆ ನುಗ್ಗಿ ಮಗುವನ್ನು ಹೊತ್ತೊಯ್ಯಲು ಯತ್ನಿಸಿದ ಚಿರತೆ | ಆತಂಕದಲ್ಲಿ ಗ್ರಾಮಸ್ಥರು

ಮಂಗಳೂರಿನ ಲಾಡ್ಜ್ ನಲ್ಲಿ ಬಾಲಕಿಯ ಸಾಮೂಹಿಕ ಅತ್ಯಾಚಾರ | ಬಾಲಕಿಯ ಮುಗ್ಧತೆ ದುರುಪಯೋಗಪಡಿಸಿ ಕೊಂಡು ಕೃತ್ಯ!

“ಧೈರ್ಯವಿದ್ದರೆ ಗುಡ್ಡೆ ಮೈದಾನಕ್ಕೆ ಬಾ” ಎಂದು ಕರೆದು ಸಹೋದರರಿಬ್ಬರ ಮೇಲೆ 20ಕ್ಕೂ ಅಧಿಕ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆ!

ಆರ್ಯನ್ ಖಾನ್ ಭಾಗವಹಿಸಿದ್ದ ಡ್ರಗ್ಸ್ ಪಾರ್ಟಿಯಲ್ಲಿ ಸಿಕ್ಕಿ ಬಿದ್ದಿದ್ದ ಬಿಜೆಪಿ ನಾಯಕನ ಭಾವನನ್ನು ಬಿಡುಗಡೆ ಮಾಡಲಾಗಿದೆ | ಎನ್‌ ಸಿಪಿ ನಾಯಕ ಗಂಭೀರ ಆರೋಪ

ಗಂಗೊಳ್ಳಿ: ಹಿಂದೂಗಳ ಮೀನುಮಾರುಕಟ್ಟೆಯನ್ನು ಮುಸ್ಲಿಮರು ಬಹಿಷ್ಕರಿಸಿದ್ದು ಯಾಕೆ? | ಒಂದೇ ತಾಯಿ ಮಕ್ಕಳಂತಿದ್ದವರ ನಡುವೆ ಏನಿದು ಗಲಾಟೆ?

ಪೊಲೀಸರ ದುಷ್ಕೃತ್ಯದಿಂದ ಠಾಣೆ ಎದುರೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಅತ್ಯಾಚಾರ ಸಂತ್ರಸ್ತೆ

ವಿದ್ಯಾರ್ಥಿನಿ ನೀನಾಳ ಆತ್ಮಹತ್ಯೆಯ ಹಿಂದಿದೆ ಹಲವು ಅನುಮಾನಗಳು | ಸೂಕ್ತ ತನಿಖೆಗೆ ಆಗ್ರಹ

ರೈತರ ಮಾರಣಹೋಮ: ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರ ಪುತ್ರ ಪೊಲೀಸರ ಮುಂದೆ ಹಾಜರು

ಇತ್ತೀಚಿನ ಸುದ್ದಿ