ಸೆಪ್ಟೆಂಬರ್ 9 ರಂದು ಮಂಗಳೂರು ವಿ.ವಿ ಸಂಧ್ಯಾ ಕಾಲೇಜಿನಲ್ಲಿ ತುಳು ಅಧ್ಯಯನ ಕೇಂದ್ರ ಉದ್ಘಾಟನೆ
ಮಂಗಳೂರು: ವಿಶ್ವವಿದ್ಯಾನಿಲಯದ ಘಟಕ ಕಾಲೇಜು ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು ಹಂಪನಕಟ್ಟೆ ಮಂಗಳೂರು ಇಲ್ಲಿನ ತುಳು ಸ್ನಾತಕೋತ್ತರ ಅಧ್ಯಯನ ವಿಭಾಗ ಹಾಗೂ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಸೆಪ್ಟೆಂಬರ್ 9 ರಂದು ಶುಕ್ರವಾರ ವಿ.ವಿ. ಸಂಧ್ಯಾ ಕಾಲೇಜಿನಲ್ಲಿ ‘ಶ್ರೀ ಸಂಸ್ಥಾನ ಒಡಿಯೂರು ತುಳು ಅಧ್ಯಯನ ಕೇಂದ್ರ’ ಇದರ ಉದ್ಘಾಟನಾ ಸಮಾರಂಭ ನಡೆಯಲಿದೆ.
ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ, ಬಳಿಕ ‘ಮಂದಾರ’ ಹಾಗೂ ‘ಬಂಗಾರ್ದ ಕುರಲ್’ ಪುಸ್ತಕಗಳನ್ನು ಬಿಡುಗಡೆಗೊಳಿಸಲಿದ್ದಾರೆ. ‘ಶ್ರೀ ಸಂಸ್ಥಾನ ಒಡಿಯೂರು ತುಳು ಅಧ್ಯಯನ ಕೇಂದ್ರ’ವನ್ನು ಸಂಸದ ನಳಿನ್ ಕುಮಾರ್ ಕಟೀಲು ಉದ್ಘಾಟಿಸಲಿದ್ದಾರೆ.
ಅಧ್ಯಕ್ಷತೆಯನ್ನು ಮಂಗಳೂರು ವಿಶ್ವವಿದ್ಯಾನಿಲಯ ಕುಲಪತಿಗಳಾದ ಪ್ರೊ. ಪಿ.ಎಸ್. ಯಡಪಡಿತ್ತಾಯ ಅವರು ವಹಿಸಲಿದ್ದಾರೆ. ತುಳು ಪಾರಂಪರಿಕ ವಸ್ತು ಸಂಗ್ರಹಾಲಯವನ್ನು ಶಾಸಕರಾದ ವೇದವ್ಯಾಸ ಕಾಮತ್ ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಶಾಸಕರಾದ ವೈ, ಭರತ್ ಶೆಟ್ಟಿ, ಯು.ಟಿ. ಖಾದರ್, ರಾಜೇಶ್ ನಾಯ್ಕ, ಸಂಜೀವ ಮಠಂದೂರು, ವಿಧಾನಪರಿಷತ್ ಸದಸ್ಯರಾದ ಪ್ರತಾಪಸಿಂಹ ನಾಯಕ್, ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷರಾದ ಡಾ. ಹರಿಕೃಷ್ಣ ಪುನರೂರು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲಸಾರ್, ನಿಕಟಪೂರ್ವ ತುಳು ಅಕಾಡೆಮಿ ಅಧ್ಯಕ್ಷರಾದ ಎ.ಸಿ.ಭಂಡಾರಿ ಭಾಗವಹಿಸಲಿದ್ದಾರೆ ಎಂದು ಪ್ರಭಾರ ಪ್ರಾಂಶುಪಾಲ ಡಾ.ಯತೀಶ್ ಹೇಳಿದರು. ಅವ್ರು ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka