ತುಳುನಾಡಿನ ದೈವ ಕೊರಗಜ್ಜನ ಚಿತ್ರವನ್ನು ಅಶ್ಲೀಲವಾಗಿ ಎಡಿಟ್ ಮಾಡಿದ ಕಿಡಿಗೇಡಿಗಳು! - Mahanayaka

ತುಳುನಾಡಿನ ದೈವ ಕೊರಗಜ್ಜನ ಚಿತ್ರವನ್ನು ಅಶ್ಲೀಲವಾಗಿ ಎಡಿಟ್ ಮಾಡಿದ ಕಿಡಿಗೇಡಿಗಳು!

koragajja
07/08/2021

ಮಂಗಳೂರು:  ತುಳುನಾಡಿನ ದೈವ ಕೊರಗಜ್ಜನ ಚಿತ್ರವನ್ನು ಅವಹೇಳನಾಕಾರಿಯಾಗಿ ಚಿತ್ರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಗೇಡಿಗಳು ಹರಡಿದ್ದು, ಈ ಸಂಬಂಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಲಾಗಿದೆ.

ವಿದೇಶಿ ನಂಬರ್ ಬಳಸಿ ಕೊರಜ್ಜನ ಫೋಟೋವನ್ನು ಆಕ್ಷೇಪಾರ್ಹವಾಗಿ ಎಡಿಟ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಡಿದ್ದು, ತುಳುನಾಡಿನಲ್ಲಿ ಕೊರಗಜ್ಜನನ್ನು ಆರಾಧಿಸುವವರ ಸಂಖ್ಯೆ ಭಾರೀ ದೊಡ್ಡದಿದೆ.  ಜನರ ನಂಬಿಕೆಗಳಿಗೆ ಧಕ್ಕೆಯುಂಟು ಮಾಡುವಂತೆ, ಇನ್ನೊಬ್ಬರ ನಂಬಿಕೆಗಳಿಗೆ ನೋವುಂಟಾಗುವಂತೆ ಫೋಟೋವನ್ನು ಎಡಿಟ್ ಮಾಡಲಾಗಿದೆ. ಹೀಗಾಗಿ ಆರೋಪಿಗಳನ್ನು ಬಂಧಿಸಿ, ಕಾನೂನಿನ ರುಚಿ ತೋರಿಸಬೇಕು ಎಂಬ ಆಕ್ರೋಶದ ಮಾತುಗಳು ಕೇಳಿ ಬಂದಿವೆ.

ಇನ್ನೂ ಘಟನೆ ಸಂಬಂಧ ಆರೋಪಿಗಳನ್ನು ಬಂಧಿಸುವಂತೆ ವಿಎಚ್ ಪಿ, ಹಾಗೂ ಬಜರಂಗದಳ ಒತ್ತಾಯಿಸಿದ್ದು, ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು  ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದೆ ಎಂದು ವರದಿಯಾಗಿದೆ.

ಇನ್ನಷ್ಟು ಸುದ್ದಿಗಳು…

ಶಾಕಿಂಗ್ ನ್ಯೂಸ್:  ಬ್ಲೂಟೂತ್ ಹೆಡ್ ಫೋನ್ ಸ್ಫೋಟ ಯುವಕ ದಾರುಣ ಸಾವು

ಕಾಂಗ್ರೆಸ್ ನಲ್ಲಿ ಹಳ್ಳಿಯಿಂದ ಡೆಲ್ಲಿವರೆಗೆ ಬರೇ ಲೀಡರ್ ಗಳೇ ತುಂಬಿದ್ದಾರೆ | ಬಿಜೆಪಿ ಕಾರ್ಯಕರ್ತರನ್ನು ಹೊಗಳಿದ ಸಿಎಂ ಬೊಮ್ಮಾಯಿ

ಸರ್ಕಾರದ ಹಣದಲ್ಲಿ ನಡೆಯುವ ಕ್ಯಾಂಟೀನ್ ಗೆ ಇಂದಿರಾ ಹೆಸರು ಬೇಡ | ಸಿ.ಟಿ.ರವಿ ಕಿಡಿ

ಮತ್ತೆ ಕೃಷ್ಣನ ತಂತ್ರಗಾರಿಗೆ ತೋರುತ್ತಾರಾ ರಮೇಶ್ ಜಾರಕಿಹೊಳಿ?

ಕಂಠಪೂರ್ತಿ ಕುಡಿದು ರಸ್ತೆಯ ಮಧ್ಯೆ ಯುವತಿ ಮಾಡಿದ ಕೆಲಸ ಏನು ಗೊತ್ತಾ? | ವಿಡಿಯೋ ವೈರಲ್

ಇತ್ತೀಚಿನ ಸುದ್ದಿ