ಅಣ್ಣನಿಗೆ ಥಳಿಸಿ, ತಂಗಿಯನ್ನು ಎಳೆದೊಯ್ದು ಅತ್ಯಾಚಾರ: ಇಬ್ಬರ ಬಂಧನ

ಬೆಂಗಳೂರು: ಅಣ್ಣ ಜೊತೆಗೆ ಹೊರಟಿದ್ದ ತಂಗಿಯನ್ನು ಎಳೆದೊಯ್ದು ಲೈಂಗಿಕ ಕಿರುಕುಳ ನೀಡಿ ಅತ್ಯಾಚಾರ ನಡೆಸಿರುವ ಘಟನೆ ನಗರದ ಕೆಆರ್ ಪುರಂ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.
ಬಿಹಾರ ಮೂಲದ ಸಂತ್ರಸ್ತೆಯ ಮೇಲೆ ಬುಧವಾರ ತಡರಾತ್ರಿ 1:30ರ ಸುಮಾರಿಗೆ ಈ ದುಷ್ಕೃತ್ಯ ನಡೆಸಲಾಗಿದೆ. ಸಂತ್ರಸ್ತೆ ತನ್ನ ಅಕ್ಕ ಹಾಗೂ ಭಾವನ ಜೊತೆಗೆ ಕೇರಳಕ್ಕೆ ಕೆಲಸಕ್ಕೆ ಹೋಗಿದ್ದರು. ಆದ್ರೆ ಕೆಲಸ ಮಾಡಲು ಇಷ್ಟವಿಲ್ಲದ ಕಾರಣ ಎರ್ನಾಕುಲಂನಿಂದ ಬೆಂಗಳೂರಿಗೆ ಬಂದು ಊರಿಗೆ ಹೋಗಲು ಮುಂದಾಗಿದ್ದರು.
ಬೆಂಗಳೂರಿಗೆ ಆಗಮಿಸುತ್ತಿದ್ದ ವೇಳೆ ತನ್ನ ದೊಡ್ಡಮ್ಮನ ಮಗನಿಗೆ ವಿಷಯ ತಿಳಿಸಿದ್ದು ಅದರಂತೆ ಕೆಆರ್ ಪುರಂ ರೈಲು ನಿಲ್ದಾಣದಲ್ಲಿ ಇಳಿದು, ಅಣ್ಣನ ಜೊತೆಗೆ ಊಟ ಮಾಡಲು ಮಹದೇವಪುರ ಕಡೆಗೆ ಹೋಗುತ್ತಿದ್ದರು. ಈ ವೇಳೆ ಅಪರಿಚಿತ ಯುವಕರು ಬಂದು ಸಂತ್ರಸ್ತೆಯ ಅಣ್ಣನ ಮೇಲೆ ಹಲ್ಲೆ ನಡೆಸಿದ್ದು, ಆರೋಪಿಗಳಲ್ಲಿ ಓರ್ವ ತಂಗಿಯನ್ನು ಎಳೆದೊಯ್ದು ಲೈಂಗಿಕ ಕಿರುಕುಳ ನೀಡಿ ಅತ್ಯಾಚಾರ ಎಸಗಿದ್ದಾನೆ. ಸಂತ್ರಸ್ತೆಯ ಕಿರುಚಾಟ ಕೇಳಿ ಸ್ಥಳೀಯರು ಸ್ಥಳಕ್ಕೆ ಆಗಮಿಸಿದ್ದು, ಕಾಮುಕರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಘಟನೆ ಸಂಬಂಧ ಮಹದೇವಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/HEkqDgrW2BlJLad5kZ1DX7