ಆಟವಾಡುತ್ತಾ ಬಾವಿಗೆ ಬಿದ್ದ ಇಬ್ಬರು ಮಕ್ಕಳ ದಾರುಣ ಸಾವು
ಚಿಕ್ಕಮಗಳೂರು: ಆಟವಾಡುತ್ತಿದ್ದ ಇಬ್ಬರು ಮಕ್ಕಳು ಬಾವಿಗೆ ಬಿದ್ದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಪ್ಪ ತಾಲೂಕಿನ ಅಮ್ಮಡಿ ಎಸ್ಟೇಟ್ ನಲ್ಲಿ ನಡೆದಿದೆ.
ಸೀಮಾ (6), ರಾಧಿಕಾ (2) ಮೃತಪಟ್ಟ ಮಕ್ಕಳಾಗಿದ್ದಾರೆ. ಮಧ್ಯಪ್ರದೇಶ ಮೂಲದ ಸುನೀತಾ ಎಂಬುವರ ಮಕ್ಕಳು ಮೃತಪಟ್ಟವರಾಗಿದ್ದಾರೆ.
ಕೂಲಿಗಾಗಿ ಮಧ್ಯಪ್ರದೇಶದಿಂದ ಬಂದು ತೋಟದ ಮನೆಯಲ್ಲಿ ಕುಟುಂಬ ವಾಸವಿತ್ತು. ಮಕ್ಕಳನ್ನ ಮನೆಯಲ್ಲೇ ಬಿಟ್ಟು ತೋಟದ ಕೆಲಸಕ್ಕೆ ತಾಯಿ ಹೋಗಿದ್ದರು. ಸಂಜೆ ಮನೆಗೆ ಬಂದಾಗ ಮಕ್ಕಳು ನಾಪತ್ತೆಯಾಗಿದ್ದರು.
ಇದರಿಂದ ಆತಂಕಕ್ಕೊಳಗಾದ ತಾಯಿ ಕಣ್ಣೀರು ಹಾಕುತ್ತಾ, ಹುಡುಕಾಡಿದ್ದಾರೆ. ಬಳಿಕ ವಿಷಯ ತಿಳಿದು ಇತರ ಕಾರ್ಮಿಕರು ಹುಡುಕಾಟ ನಡೆಸಿದಾಗ, ಬಾವಿಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆಯಾಗಿದೆ.
ಘಟನೆ ಸಂಬಂಧ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: