ತಾಯಿಯನ್ನು ರಕ್ಷಿಸಲು ನೀರಿಗೆ ಹಾರಿದ ಇಬ್ಬರು ಮಕ್ಕಳು: ಮೂವರು ಜಲಸಮಾಧಿ!
ಚಾಮರಾಜನಗರ: ನೀರಿನಲ್ಲಿ ಮುಳುಗುತ್ತಿದ್ದ ತಾಯಿಯನ್ನು ರಕ್ಷಿಸಲು ಹೋಗಿ ತಾಯಿ ಸಹಿತ ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಹನೂರು ತಾಲೂಕಿನ ಗುಂಡಲ್ ಜಲಾಶಯದಲ್ಲಿ ನಡೆದಿದೆ.
ಮೃತರನ್ನು ಪುದೂರು ಗ್ರಾಮದ ನಿವಾಸಿ 33 ವರ್ಷದ ಮೀನಾ, 13 ವರ್ಷದ ಪವಿತ್ರ ಮತ್ತು 12 ವರ್ಷದ ಕೀರ್ತಿ ಎಂದು ಗುರುತಿಸಲಾಗಿದೆ.
ಜಲಾಶಯದಲ್ಲಿ ಬಟ್ಟೆ ತೊಳೆಯುತ್ತಿದ್ದ ವೇಳೆ ತಾಯಿ ಆಕಸ್ಮಿಕವಾಗಿ ಕಾಲು ಜಾರಿ ಜಲಾಶಕ್ಕೆ ಬಿದ್ದಿದ್ದಾರೆ. ತಾಯಿ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದನ್ನು ನೋಡಿದ ಮಕ್ಕಳು ತಾಯಿಯನ್ನು ರಕ್ಷಿಸಲು ಮುಂದಾಗಿದ್ದು ನೀರಿನ ಸೆಳೆತಕ್ಕೆ ಮೂವರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ ಎನ್ನಲಾಗಿದೆ. ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth