ಶಾಲೆಯ ಹಿಂಭಾಗದಲ್ಲಿ ಪ್ರತ್ಯಕ್ಷವಾಗಿದ್ದ ಎರಡು ಮೊಸಳೆಗಳ ಸೆರೆ
22/11/2024
ಬಳ್ಳಾರಿ: ಶಾಲೆಯ ಪಕ್ಕದ ಹಳ್ಳದಲ್ಲಿದ್ದ ಎರಡು ಮೊಸಳೆಗಳನ್ನು ಅರಣ್ಯ ಇಲಾಖೆ ಸೆರೆ ಹಿಡಿದ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ನಿಟ್ಟೂರು ಗ್ರಾಮದ ಶಾಲೆಯ ಬಳಿ ನಡೆದಿದೆ.
ನಿಟ್ಟೂರಿನ ಸಾಮ್ರಾಟ ಹಿರಿಯ ಪ್ರಾಥಮಿಕ ಶಾಲೆಯ ಹಿಂಭಾಗದ ಹಳ್ಳದಲ್ಲಿ ಮೊಸಳೆಗಳು ಕಾಣಿಸಿಕೊಂಡಿದ್ದವು. ಹೀಗಾಗಿ ಶಾಲೆಗೆ ಹೋಗಲು ವಿದ್ಯಾರ್ಥಿಗಳು ಹಿಂದೇಟು ಹಾಕಿದ್ದರು.
ಮೊಸಳೆಯ ಬಗ್ಗೆ ಗ್ರಾಮಸ್ಥರು ಅರಣ್ಯ ಇಲಾಖೆ ಗಮನಕ್ಕೆ ತಂದಿದ್ದರು. ಅರಣ್ಯ ಇಲಾಖೆಯು ವೇಷಗಾರ ಮಲ್ಲಯ್ಯ ಅವರ ಸಹಾಯದಿಂದ ಮೊಸಳೆಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: