ಮುಳ್ಳು ಹಂದಿ ಬೇಟೆಯಾಡಲು ಹೋದ ಇಬ್ಬರು ಕಾರ್ಮಿಕರ ದಾರುಣ ಸಾವು - Mahanayaka
5:58 PM Wednesday 4 - December 2024

ಮುಳ್ಳು ಹಂದಿ ಬೇಟೆಯಾಡಲು ಹೋದ ಇಬ್ಬರು ಕಾರ್ಮಿಕರ ದಾರುಣ ಸಾವು

porcupine
28/02/2023

ಕೊಟ್ಟಿಗೆಹಾರ:  ಮುಳ್ಳು ಹಂದಿ ಇದ್ದ  ಸುರಂಗಕ್ಕೆ  ಶಿಕಾರಿ ಮಾಡಲು ನುಗ್ಗಿ ಇಬ್ಬರು ಕೂಲಿಕಾರ್ಮಿಕರು ಸಾವನ್ನಪ್ಪಿದ ಘಟನೆ ಮೂಡಿಗೆರೆ ತಾಲ್ಲೂಕಿನ ಬಾಳೂರು ಹೋಬಳಿಯ ಮಾಳಿಗನಾಡು ಎಂಬಲ್ಲಿ ಘಟನೆ ನಡೆದಿದೆ.

ಮಾಳಿಗನಾಡು ಸಮೀಪದ ಆನೆಗುಂಡಿ ಎಸ್ಟೇಟ್ ನಲ್ಲಿ  ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕರಾದ ತಮಿಳುನಾಡು ಮೂಲದ ವಿಜಯ್ (28 ವರ್ಷ), ಶರತ್ (26 ವರ್ಷ) ಸಾವನ್ನಪ್ಪಿದ ಕೂಲಿಕಾರ್ಮಿಕರಾಗಿದ್ದಾರೆ.

ಮುಳ್ಳು ಹಂದಿ ಶಿಕಾರಿ ಮಾಡಲು ಇಬ್ಬರೂ ಸುರಂಗಕ್ಕೆ ನುಗ್ಗಿದ ಪರಿಣಾಮ ಉಸಿರಾಡಲು ಸಾಧ್ಯವಾಗದೇ ಇಬ್ಬರು ಸಾವನ್ನಪ್ಪಿದ್ದಾರೆ.  ಕಾಳು ಮೆಣಸು ಕೊಯ್ಯಲು ಬಂದಿದ್ದ ತಮಿಳುನಾಡಿನ ಕಾರ್ಮಿಕರು ಮುಳ್ಳು ಹಂದಿ ಶಿಕಾರಿ ಮಾಡಲು ಗುಡ್ಡಕ್ಕೆ  ತೆರಳಿದ್ದರು ಎನ್ನಲಾಗಿದೆ.

ಸುರಂಗದ ದರಕ್ಕೆ ಹೊಗೆ ಹಾಕಿ ಇಬ್ಬರು ದರದ ಒಳಗೆ ನುಗ್ಗಿದ ಪರಿಣಾಮ  ಹೊಗೆಯಿಂದ ಉಸಿರಾಡಲು ಸಾಧ್ಯವಾಗದೆ ಗುಹೆಯೊಳಗೆ ಮೃತಪಟ್ಟಿದ್ದಾರೆ ಎಂದು ಸ್ಥಳೀಯರು  ಹೇಳುತ್ತಿದ್ದಾರೆ.

ಸ್ಥಳಕ್ಕೆ ಬಾಳೂರು ಸಬ್ ಇನ್ಸ್ಪೆಕ್ಟರ್ ಪವನ್ ಕುಮಾರ್, ಪೊಲೀಸರು, ಮತ್ತು ಸ್ಥಳೀಯರು  ಗುಹೆಯೊಳಗೆ ನುಗ್ಗಿ  ಶವಗಳನ್ನು ಹೊರತೆಗೆಯಲಾಯಿತು. ಮೂಡಿಗೆರೆ ತಾಲ್ಲೂಕಿನ ಬಾಳೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ