ಕೆಟ್ಟು ನಿಂತ ಲಾರಿಗೆ ಡಿಕ್ಕಿ ಹೊಡೆದ ಎರಡು ಸ್ಕೂಟರ್: ಓರ್ವ ಸಾವು, ಮತ್ತೋರ್ವನ ಸ್ಥಿತಿ ಗಂಭೀರ
ಕೆಟ್ಟು ನಿಂತ ಲಾರಿಗೆ ಎರಡು ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟು, ಸಹಸವಾರ ಗಂಭೀರ ಗಾಯಗೊಂಡ ಘಟನೆ ಮಂಗಳೂರಲ್ಲಿ ನಡೆದಿದೆ.
ಇನ್ನೊಂದು ಸ್ಕೂಟರಿನಲ್ಲಿದ್ದ ಸವಾರ ಕೂಡಾ ಗಾಯಗೊಂಡಿದ್ದಾರೆ. ರಾ.ಹೆ.66ರ ನೇತ್ರಾವತಿ ಸೇತುವೆಯಲ್ಲಿ ಇಂದು ಮುಂಜಾನೆ ಸಂಭವಿಸಿದ ಈ ಅಪಘಾತದಲ್ಲಿ ಮುಹಮ್ಮದ್ ನೌಫಾಲ್ (26) ಮೃತಪಟ್ಟಿದ್ದಾರೆ. ಸಹಸವಾರ ಉಮರ್ ಫಾರೂಕ್ ಗಾಯಗೊಂಡಿದ್ದಾರೆ.
ನೌಫಾಲ್ ಬೈಕಂಪಾಡಿಯ ಎಪಿಎಂಸಿಯಲ್ಲಿ ತರಕಾರಿ ಅಂಗಡಿ ಹೊಂದಿದ್ದರು. ದಿನನಿತ್ಯ ಟೆಂಪೊದಲ್ಲಿ ಕಲ್ಲಾಪಿಗೆ ಬರುವ ನೌಫಾಲ್ ಇಂದು ಮುಂಜಾನೆ ಸ್ಕೂಟರಲ್ಲಿ ತರಕಾರಿ ಕೊಂಡೊಯ್ಯಲು ಬಂದಿದ್ದರು ಎನ್ನಲಾಗಿದೆ. ಇನ್ನೊಂದು ಸ್ಕೂಟರಿನಲ್ಲಿದ್ದ ಗಾಯಾಳುವಿನ ವಿವರ ತಿಳಿದುಬಂದಿಲ್ಲ. ಇಬ್ಬರೂ ಕಲ್ಲಾಪು ಗ್ಲೋಬಲ್ ಮಾರುಕಟ್ಟೆಗೆ ತರಕಾರಿ ವ್ಯಾಪಾರದ ಹಿನ್ನೆಲೆಯಲ್ಲಿ ಪಂಪ್ ವೆಲ್ ಕಡೆಯಿಂದ ತೊಕ್ಕೊಟ್ಟು ಕಡೆಗೆ ತೆರಳುತ್ತಿದ್ದ ಸಂದರ್ಭ ವೇಳೆ ಈ ಅಪಘಾತ ಸಂಭವಿಸಿದೆ. ಈ ಬಗ್ಗೆ ಮಂಗಳೂರು ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw