ಕಲ್ಯಾಣಿಯಲ್ಲಿ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು

ಬೆಂಗಳೂರು: ಬನ್ನೇರುಘಟ್ಟ ಸುವರ್ಣಮುಖಿ ಕಲ್ಯಾಣಿಗೆ ಈಜಲು ತೆರಳಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರುಪಾಲಾದ ಘಟನೆ ನಡೆದಿದೆ.
ಬೊಮ್ಮನಹಳ್ಳಿ ಗಾರ್ವೇಬಾವಿ ಪಾಳ್ಯದ ದೀಪು(20), ಯೋಗಿಶ್ವರನ್(20) ಮೃತಪಟ್ಟ ವಿದ್ಯಾರ್ಥಿಗಳಾಗಿದ್ದಾರೆ. ಹೆಬ್ಬಗೋಡಿಯ ಕಾಲೇಜೊಂದರ 5 ಮಂದಿ ವಿದ್ಯಾರ್ಥಿಗಳು ಬನ್ನೇರುಘಟ್ಟ ಸುವರ್ಣಮುಖಿ ಕಲ್ಯಾಣಿಗೆ ಈಜಲು ಬಂದಿದ್ದ ವೇಳೆ ಈ ಘಟನೆ ನಡೆದಿದೆ.
ನೀರಿಗೆ ಇಳಿದಿದ್ದ ವಿದ್ಯಾರ್ಥಿಗಳ ಪೈಕಿ ದೀಪು ಹಾಗೂ ಯೋಗೀಶ್ವರನ್ ಈಜಲು ಸಾಧ್ಯವಾಗದೇ ಪರದಾಡಿದ್ದಾರೆ. ಕೆಲ ಕಾಲ ಜೀವ ಉಳಿಸಿಕೊಳ್ಳಲು ಸಾಕಷ್ಟು ಹೋರಾಟ ನಡೆಸಿದ ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿದ್ದಾರೆ.
ನೀರಲ್ಲಿ ಮುಳುಗುತ್ತಿದ್ದ ಸ್ನೇಹಿತರನ್ನು ರಕ್ಷಿಸಲಾಗದೇ ಉಳಿದ ಸ್ನೇಹಿತರು ಪರದಾಡಿದ್ದಾರೆ. ಈ ಘಟನೆಯ ದೃಶ್ಯ ಸ್ಥಳೀಯ ಯುವಕರ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/HEkqDgrW2BlJLad5kZ1DX7