ಮೂರು ಅಂತಸ್ತಿನ ಕಟ್ಟಡಕ್ಕೆ ಬೆಂಕಿ: ಇಬ್ಬರು ಕಾರ್ಮಿಕರ ದಾರುಣ ಸಾವು
ಬೆಂಗಳೂರು: ಸಿಲಿಂಡರ್ ಸೋರಿಕೆಯಿಂದ ನಿರ್ಮಾಣ ಹಂತದ ಕಟ್ಟಡ ಬೆಂಕಿಗೆ ಆಹುತಿಯಾಗಿದ್ದು, ಘಟನೆಯಲ್ಲಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ ಘಟನೆ ನಗರದ ಮಾಗಡಿ ರಸ್ತೆಯ ಸೀಗೆಹಳ್ಳಿಯ ಶಿವಾನಿ ಗ್ರೀನ್ಸ್ ಲೇಔಟ್ ನಲ್ಲಿ ನಡೆದಿದೆ.
ಉತ್ತರ ಪ್ರದೇಶ ಮೂಲದ ಉದಯ್ ಬಾನು(40) ಹಾಗೂ ಬಿಹಾರ ಮೂಲದ ರೋಶನ್(23) ಮೃತಪಟ್ಟ ಕಾರ್ಮಿಕರು ಎಂದು ಗುರುತಿಸಲಾಗಿದೆ. ಬೆಂಕಿಗೆ ಆಹುತಿಯಾದ ಕಟ್ಟಡ ಸತೀಶ್ ಎಂಬವರಿಗೆ ಸೇರಿದ ಕಟ್ಟಡವಾಗಿದ್ದು, ನಿರ್ಮಾಣ ಹಂತದಲ್ಲಿದ್ದ ಈ ಕಟ್ಟಡದಲ್ಲಿ ವುಡ್ ವರ್ಕ್ಸ್ ಮಾಡಲಾಗುತ್ತಿತ್ತು ಎನ್ನಲಾಗಿದೆ.
ಕೆಲಸ ವೇಳೆ ಗ್ಯಾಸ್ ಸೋರಿಕೆಯಾದ ಪರಿಣಾಮ ದೊಡ್ಡ ಪ್ರಮಾಣದಲ್ಲಿ ಬೆಂಕಿ ಉರಿದಿದ್ದು, ಕಟ್ಟಡ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಘಟನೆ ವೇಳೆ 6 ಮಂದಿ ಕಾರ್ಮಿಕರು ಕೆಲಸದಲ್ಲಿ ನಿರತರಾಗಿದ್ದರು. ನಾಲ್ವರು ಅಪಾಯದಿಂದ ಪಾರಾಗಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: