ದಕ್ಷಿಣ ಕನ್ನಡ: ನಿಗೂಢವಾಗಿ ಸಾವನ್ನಪ್ಪಿದ ನೆರೆಹೊರೆಯ ಇಬ್ಬರು ಯುವತಿಯರು!

ನೆರೆಹೊರೆಯ ಮನೆಯ ಇಬ್ಬರು ಯುವತಿಯರು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.
ಪಟ್ರಮೆ ಗ್ರಾಮದ ರಕ್ಷಿತಾ (22) ಹಾಗೂ ಅವರ ನೆರೆಯಮನೆಯವರಾದ ಲಾವಣ್ಯ (21) ಮೃತಪಟ್ಟವರು. ಇವರಿಬ್ಬರು ಹೊಟ್ಟೆನೋವಿನಿಂದ ನರಳಿ ಆಸ್ಪತ್ರೆಗೆ ದಾಖಲಾಗಿ ಮೃತಪಟ್ಟಿದ್ದಾರೆ.
ಇವರಿಬ್ಬರು ಸೇವಾ ಪ್ರತಿನಿಧಿಯಾಗಿ ಕೆಲ ಸಮಯಗಳಿಂದ ಕೆಲಸ ಮಾಡುತ್ತಿದ್ದರು. ರಕ್ಷಿತಾ ಮತ್ತು ಲಾವಣ್ಯ ತಮ್ಮ ಮನೆಯಲ್ಲಿ ಹೊಟ್ಟೆನೋವೆಂದು ನರಳಾಡಿ ತೀವ್ರ ಅಸ್ವಸ್ಥಗೊಂಡಿದ್ದರು.
ಇವರಿಬ್ಬರನ್ನು ಸ್ಥಳೀಯರ ಸಹಕಾರದಲ್ಲಿ ನೆಲ್ಯಾಡಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ರಕ್ಷಿತಾ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಲಾವಣ್ಯರನ್ನು ಅವರ ಮನೆಯವರು ಪುತ್ತೂರು ಆಸ್ಪತ್ರೆಗೆ ಕರೆದೊಯ್ದು ಅಲ್ಲಿಯ ವೈದ್ಯರ ಸಲಹೆಯಂತೆ ಸುರತ್ಕಲ್ ಆಸ್ಪತ್ರೆಗೆ ದಾಖಲಿಸಿದ್ದರು.
ಆದರೆ ಚಿಕಿತ್ಸೆ ಫಲಕಾರಿಯಾಗದೇ ರಕ್ಷಿತಾ ಅವರು ಆಸ್ಪತ್ರೆಯಲ್ಲಿ ಮೃತಪಟ್ಟರೆ, ಲಾವಣ್ಯ ಸುರತ್ಕಲ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EOUjVqy3Mmp66N4bRSBoht
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw