ಹಳ್ಳದ ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ಸಾವು: ಮನೆಯ ಆಧಾರ ಸ್ತಂಭ ಕಳಚಿ ಹೋಯ್ತು!
ಹಳ್ಳದ ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ಮೃತಪಟ್ಟ ಘಟನೆ ಮಂಗಳೂರು ನಗರದ ಪಡೀಲ್ ಅಳಪೆ ಪಡ್ಪು ರೈಲ್ವೇ ಬ್ರಿಡ್ಜ್ ಸಮೀಪ ನಡೆದಿದೆ.
ಅಳಪೆ ಪಡ್ಪುರೆಂಜ ನಿವಾಸಿ ವರುಣ್ (27) ಮತ್ತು ಎಕ್ಕೂರು ಕೆಎಚ್ ಬಿ ಕಾಲನಿ ನಿವಾಸಿ ವೀಕ್ಷಿತ್ (28) ಮೃತಪಟ್ಟ ಯುವಕರು. ವರುಣ್ ವೃತ್ತಿಯಲ್ಲಿ ಚಾಲಕನಾಗಿದ್ದರು. ದೀಕ್ಷಿತ್ ಮೆಡಿಕಲ್ ರೆಪ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ವೀಕ್ಷಿತ್ ಅವರಿಗೆ ತಂದೆ-ತಾಯಿ ಹಾಗೂ ಒಬ್ಬ ಸಹೋದರ ಇದ್ದಾರೆ. ವರುಣ್ ಅವರಿಗೂ ತಂದೆ–ತಾಯಿ ಹಾಗೂ ತಮ್ಮ ಇದ್ದಾನೆ. ಇಬ್ಬರು ಯುವಕರು ಕ್ರಿಯಾಶೀಲರಾಗಿದ್ದು, ಮನೆಯ ಆಧಾರ ಸ್ತಂಭವಾಗಿದ್ದರು. ಇವರ ನಿಧನಕ್ಕೆ ಶಾಸಕ ವೇದವ್ಯಾಸ ಕಾಮತ್ ಕೂಡಾ ಫೇಸ್ ಬುಕ್ ನಲ್ಲಿ ಸಂತಾಪ ವ್ಯಕ್ಯಪಡಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw