ಕುಂಭಮೇಳಕ್ಕೆ ತೆರಳಿದ್ದ ಕರ್ನಾಟಕ ಮೂಲದ ಇಬ್ಬರು ಯುವಕರು ಅಪಘಾತಕ್ಕೆ ಬಲಿ!

ಮೈಸೂರು: ಕುಂಭಮೇಳಕ್ಕೆ ಉತ್ತರ ಪ್ರದೇಶದ ಪ್ರಯಾಗ್ ರಾಜ್ ಗೆ ತೆರಳಿದ್ದ ಕರ್ನಾಟಕ ಮೂಲದ ಇಬ್ಬರು ಯುವಕರು ಕಾರು ಅಪಘಾತದಲ್ಲಿ ಸಾವನ್ನಪ್ಪಿದ ದಾರುಣ ಘಟನೆ ಉತ್ತರ ಪ್ರದೇಶದ ಮಿರ್ಜಾಪುರ ಬಳಿ ನಡೆದಿದೆ.
ಮೈಸೂರು ತಾಲೂಕಿನ ಮಂಟಿಕ್ಯಾತನಹಳ್ಳಿ ನಿವಾಸಿ ರಾಮಕೃಷ್ಣ ಶರ್ಮಾ, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ ಎಸ್ ನಿವಾಸಿ ಅರುಣ್ ಶಾಸ್ತ್ರಿ ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಎರಡು ಕಾರುಗಳಲ್ಲಿ ಯುವಕರು ಯಾತ್ರೆ ತೆರಳಿದ್ದರು. ಪ್ರಯಾಗ್ ರಾಜ್ ಯಾತ್ರೆ ಮುಗಿಸಿದ ಬಳಿಕ ಕಾಶಿಗೆ ಮರಳುತ್ತಿದ್ದ ವೇಳೆ ಮಿರ್ಜಾಪುರ ಬಳಿ ಕಾರು ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ಇಬ್ಬರ ತಲೆಗೆ ಗಂಭೀರವಾದ ಏಟು ಬಿದ್ದಿತ್ತು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: